ರಾಜ್ಯಪಾಲರು ಬಿಜೆಪಿಯ ಏಜೆಂಟ್: ಕಾಂಗ್ರೆಸ್ ಆರೋಪ

0
55
loading...

ರಾಜ್ಯಪಾಲರು ಬಿಜೆಪಿಯ ಏಜೆಂಟ್: ಕಾಂಗ್ರೆಸ್ ಆರೋಪ

ಕನ್ನಡಮ್ಮ ಸುದ್ದಿ-ಬೆಳಗಾವಿ: ರಾಜ್ಯ ವಿಧಾನ ಸಭೆ ಚುನಾವಣೆಯ ಫಲಿತಾಂಶ ದಲ್ಲಿ ಬಿಜೆಪಿಗೆ ಬಹುಮತ ಇಲ್ಲದೆ ಇದ್ದರೂ ಕೇಂದ್ರ ಸರಕಾರ ರಾಜ್ಯಪಾಲರ ಮೂಲಕ ಅಸಂವಿಧಾನಿಕವಾಗಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು .
ಶುಕ್ರವಾರ ನಗರದ ಚೆನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲ ವಾಜುಭಾಯ್ ವಾಲಾ ಅವರು ಕೇಂದ್ರ ಸರಕಾರದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು .
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸುಭಾಷ ಸೋನವಾಲ್ಕರ ,ಬೀಮ್ಮಪ್ಪ ಹಂದಿಗೂದ ,ಬಿ‌ಎಲ್ ಉಪ್ಪಾರ ಇದ್ದರು .

loading...