ರೈತರ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0
36
loading...

ರೈತರ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕನ್ನಡಮ್ಮ-ಬೆಳಗಾವಿ ೨೮: ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಮಾತಿನಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು .
ಸೋಮವಾರ ನಗರದ ಚನ್ನಮ್ಮಾ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರೈತ ಪರ ಆಡಳಿತ ನೀಡುತ್ತೆನೆ ಅಧಿಕಾರಕ್ಕೆ ಬಂದ ೨೪ ಗಂಟೆಗಳಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಯೂ ಟರ್ನ್ ಹೊಡೆದಿದ್ದಾರೆ .ಕೂಡಲೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರ ಆಗ್ರಹಿಸಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರುನ್ನು ಪೊಲೀಸ್ ರು ಬಂಧಿಸಿದರು.ರೈತರ ಸಾಲ ಮನ್ನಾ ಮಾಡಬೇಕೆಂದು ಬಿಜೆಪಿ ರೈತ ಮೊರ್ಚಾ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.
ಪ್ರತಿಭಟನೆಯಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ,ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮಹಾ ನಗರದ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ ,ಮುಖಂಡರಾದ ರಾಜು ಚಿಕ್ಕನಗೌಡರ,ಲೀನಾ ಟೋಪಣ್ಣವರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

loading...