ಶಾಂತಿಯುತ ಮತದಾನ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಡಿಸಿ ಶಾಂತಾರಾಮ ಅಭಿನಂದನೆ

0
17
loading...

ಕನ್ನಡಮ್ಮ ಸುದ್ದಿ-ಬಾಗಲಕೋಟೆ: ಜಿಲ್ಲೆಯ ಏಳು ಮತಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಶೇ.74.95 ರಷ್ಟು ಮತದಾನವಾಗಿದೆ. ಚುನಾವಣಾ ಕಾರ್ಯದಲ್ಲಿ ತೃಪ್ತಿಕರವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಜಿಲ್ಲಾ ಚನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಅಭಿನಂದಿಸಿದ್ದಾರೆ.
ಉದ್ಯಾನಗಿರಿಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕಾ ದಿನದ ಸಿದ್ದತೆ ಹಾಗೂ ಶಾಂತಿಯುತವಾಗಿ ಜರುಗಿದ ಚುನಾವಣಾ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ವಿಷಯ ತಿಳಿಸಿದರು. ಮತದಾನ ದಿನದಂದು 1694 ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ, 2260 ಪೊಲೀಸ್ ಸಿಬ್ಬಂದಿ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಚಾಹನ ಚಾಲಕರು ಹಾಗೂ ನಿರ್ವಾಹಕರನ್ನು ಉತ್ತಮವಾಗಿ ಕಾರ್ಯ ನಿರ್ವಗಹಿಸಿದ ನಿಮಿತ್ಯ ಅವರು ಅಭಿನಂದಿಸಿದರು.

ಜಿಲ್ಲೆಯಲ್ಲಿ ಒಟ್ಟು ಶೇ.74.95 ರಷ್ಟು ಮತದಾನವಾಗಿದ್ದು, ಅದರಲ್ಲಿ ಶೇ.76.12 ರಷ್ಟು ಪುರುಷರು ಶೇ.73.14 ರಷ್ಟು ಮಹಿಳೆಯರು ಮತದಾನ ಮಾಡಿದ್ದಾರೆ. ಮುಧೋಳ ಮೀಸಲು ಮತಕ್ಷೇತ್ರದಲ್ಲಿ ಶೇ.75.16, ತೇರದಾಳ ಮತಕ್ಷೇತ್ರದಲ್ಲಿ ಶೇ.78.46, ಜಮಖಂಡಿ ಮತಕ್ಷೇತ್ರದಲ್ಲಿ ಶೇ.74.99, ಬೀಳಗಿ ಮತಕ್ಷೇತ್ರದಲ್ಲಿ ಶೇ.79.45, ಬಾದಾಮಿ ಮತಕ್ಷೇತ್ರದಲ್ಲಿ ಶೇ.74.65, ಬಾಗಲಕೋಟ ಮತಕ್ಷೇತ್ರದಲ್ಲಿ ಶೇ. 69.36 ಹಾಗೂ ಹುನಗುಂದ ಮತಕ್ಷೇತ್ರದಲ್ಲಿ ಶೇ.72.87 ರಷ್ಟು ಮತದಾನವಾಗಿದೆ. ಜಿಲ್ಲೆಯ ಬೀಳಗಿ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನವಾದರೆ, ಬಾಗಲಕೋಟ ಮತಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದ್ದು ಕಂಡುಬಂದಿದೆ ಎಂದು ತಿಳಿಸಿದರು. ಮೇ 15 ರಂದು ಮತ ಎಣಿಕೆ ನಡೆಯಲಿದ್ದು, ಉದ್ಯಾನಗಿರಿಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಏಣಿಕಾ ಕೇಂದ್ರ ಹಾಗೂ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಏಳು ಮತಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರತಾ ಕೊಠಡಿಯಲ್ಲಿ ಭದ್ರವಾಗಿ ಇರಿಸಲಾಗಿದೆ.
ಮತಎಣಿಕೆ ಸುಸೂತ್ರವಾಗಿ ನಡೆಸಲು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ: ಎಸ್.ಪಿ.ಸಿ. ವಂಶಿಕೃಷ್ಣ ಮತ ಎಣಿಕೆ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಎಣಿಕೆ ಕೇಂದ್ರಗಳಲ್ಲಿ ಚುನಾವಣಾ ಅಭ್ಯರ್ಥಿ ಹಾಗೂ ಪಕ್ಷದ ಏಜೇಂಟರುಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮೊಬೈಲ್‍ಗಳನ್ನು ತಂದಿದ್ದರೆ ಅವುಗಳನ್ನು ಎಣಿಕಾ ಕೇಂದ್ರದಲ್ಲಿ ತಿಳಿಸಿದ ಸಿಬ್ಬಂದಿಗಳಲ್ಲಿ ಡಿಪಾಜಿಟ್ ಮಾಡಬೇಕು. ಮಾದ್ಯಮ ಕೇಂದ್ರವನ್ನು ಸಹ ಸ್ಥಾಪಿಸಲಾಗಿದ್ದು, ಮಾದ್ಯಮದವರಿಗೆ ಮಾಧ್ಯಮ ಕೇಂದ್ರದಲ್ಲಿ ಮಾತ್ರ ಮೊಬೈಲ್ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಮಾಧ್ಯಮಗಳ ಓಬಿ ವ್ಯಾನುಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಜಿಲ್ಲಾ ವಾರ್ತಾಧಿಕಾರಿ ಡಾ.ಎಸ್.ಎಂ.ಹಿರೇಮಠ, ಎಂ.ಸಿ.ಎಂ.ಸಿ ನೋಡಲ್ ಅಧಿಕಾರಿ ರವೀಂದ್ರ ಹಕಾಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಉಕ್ಕಲಿ, ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳಾದ ಕೊಂಗವಾಡ, ಕಾಮಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

loading...