ಅಂಕಿತಕುಮಾರಗೆ ಅಸಾಧಾರಣ ಪ್ರತಿಭಾ ಪುರಸ್ಕಾರ

0
17
loading...

ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ ಆದರ್ಶ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ಅಂಕಿತಕುಮಾರ ಸಿ ನಾಯಕ ಅಕ್ಟೋಬರ್26 2017 ರಂದು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಕ್ರೀಡಾ ಕ್ಷೇತ್ರದ(ಕರಾಟೆ) ವಿಭಾಗದಲ್ಲಿ ಜಿಲ್ಲಾಮಟ್ಟದ ಅಸಾಧಾರಣ ಪ್ರತಿಭಾ ಮಗು ಎಂದು ಆಯ್ಕೆಯಾದ ಪ್ರಯುಕ್ತ ಶುಕ್ರವಾರ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಮಾಣ ಪತ್ರ ನೀಡಿದರು.
ಈ ಪ್ರಯುಕ್ತ ಜೂನ್ 1 2018 ರಂದು ಗದಗ ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಡೆದ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರಾಟೆ ಸ್ಪರ್ಧೆಯಲ್ಲಿ ಸಾಧನೆಗೈದ ಅಂಕಿತಕುಮಾರ ಸಿ ನಾಯಕ ಈತನಿಗೆ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಮಾಣ ಪತ್ರದ ಜೊತೆಗೆ 10 ಸಾವಿರ ರೂಪಾಯಿ ಪುರಸ್ಕಾರ ಚಕ್ ವಿತರಿಸಿದರು.

loading...