ಅಭಿವೃದ್ಧಿಗೆ ಜೆಡಿಎಸ್ ಬೆಂಬಲಿಸಿ : ಅಮರೇಗೌಡ

0
8
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮತ್ತು ಈ ಭಾಗದ ಸಮಸ್ಯೆಗಳ ನಿವಾರಣೆಗಾಗಿ ಈ ಬಾರಿ ಈಶಾನ್ಯ ಪದವೀಧರರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್.ಪ್ರತಾಪ್‍ರೆಡ್ಡಿಯವರನ್ನು ಬೆಂಬಲಿಸಿ ಪ್ರಥಮ ಪ್ರಾಶಸ್ತ ಮತ ನೀಡುವಂತೆ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ಮನವಿ ಮಾಡಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ಜೆಡಿಎಸ್ ಅಭ್ಯರ್ಥಿ ಎನ್.ಪ್ರತಾಪ್‍ರೆಡ್ಡಿ ಪರ ಮತಯಾಚಿಸಿದ ಅವರು ಹೈ.ಕ ಭಾಗಕ್ಕೆ 371 ನೇ ಜೆ ಜಾರಿಯಾದರೂ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ, ನಮ್ಮ ಭಾಗಕ್ಕೆ ಸಿಗಬೇಕಾದ ಹಕ್ಕುಗಳ ಬಗ್ಗೆ ವಿಧಾನಪರಿಷತ್‍ನಲ್ಲಿ ಹೋರಾಟ ಮಾಡಿ ಈ ಭಾಗಕ್ಕೆ ನ್ಯಾಯ ದೊರಕಿಸಿ ಕೊಡಬೇಕಾಗಿದೆ, ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದು ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಪದವೀಧರರ ಸಮಸ್ಯೆ ನಿವಾರಣೆ ಹಾಗೂ ಈ ಭಾಗ ಇನ್ನು ಸಾಕಷ್ಟು ಅಭಿವೃದ್ಧಿಯಾಗಲು ಸಾಧ್ಯವೆಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ವಕ್ತಾರ ಮೌನೇಶ ಎಸ್.ವಡ್ಡಟ್ಟಿ, ಜಿಲ್ಲಾ ಯುವ ಜೆಡಿಎಸ್ ಕಾರ್ಯಾಧ್ಯಕ್ಷ ವೆಂಕಟೇಶ ಬೆಲ್ಲದ್ ಜೆಡಿಎಸ್ ಮುಖಂಡರಾದ ಸಣ್ಣ ನಾಗರಾಜ್,ಸಂತೋಷ್,ಮಲ್ಲಿಕಾರ್ಜುನ್, ವಿಠ್ಠಲ್ ಎಚ್, ಸೇರಿದಂತೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

loading...