ಉಚಿತ ಬಸ್‌ಪಾಸ್‌ ವಿತರಣೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

0
11
loading...

ಬ್ಯಾಡಗಿ: ಎಲ್ಲಾ ವರ್ಗದ ವಿದ್ಯಾಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಎಸ್‌ಜೆಜೆಎಂ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಪ್ರತಿಭಟನಾ ಮೆರವಣೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ನೆಹರೂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಹಾಕಲಾಯಿತು.
ನೇತೃತ್ವ ವಹಿಸಿದ್ದ ಎಬಿವಿಪಿ ಸಂಚಾಲಕ ಬಿ.ಎಂ.ಹಿತೈಷಿ ಮಾತನಾಡಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಬಜೆಟ್‌ನಲ್ಲಿ ಪ್ರಾಥಮಿಕ ಶಾಲೆಯಿಂದ ಪದವಿ ಹಂತದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವ ಭರವಸೆ ನೀಡಿತ್ತು. ಆದರೆ ಮೈತ್ರಿ ಸರ್ಕಾರ ಅದನ್ನು ರದ್ದುಗೊಳಿಸಿದೆ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ ಪಾಸ್‌ ನೀಡುತ್ತಿದ್ದು ಇತರರಿಗೆ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಹೊನ್ನಪ್ಪ ನಿಂಬಣ್ಣನವರ, ಪವನ, ಗೋಸಾವಿ, ರಾಜೇಂದ್ರ ಓಲೇಕಾರ, ಶಶಿಕುಮಾರ ಸಣ್ಣಶಿವಣ್ಣನವರ, ರಂಜಿತಾ ಮಡಿವಾಳರ, ಸಂತೋಷ ಬಣಕಾರ ಹಾಗೂ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

loading...