ಉಚಿತ ಬಸ್ ಪಾಸ್ ಕಲ್ಪಿಸುವಂತೆ ಒತ್ತಾಯಿಸಿ ಮನವಿ

0
19
loading...

ಕನ್ನಡಮ್ಮ ಸುದ್ದಿ-ಕುಮಟಾ: ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಕುಮಟಾ ಘಟಕದ ನೇತ್ರತ್ವದಲ್ಲಿ ನೆಲ್ಲಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳು ಬುಧವಾರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ ವಿ ಎಸ್ ಬಣಗಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಹಿಂದಿನ ರಾಜ್ಯ ಸರ್ಕಾರವು ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿದ್ದರಿಂದ ಆರ್ಥಿಕವಾಗಿ ಹಿಂದುಳಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನವಾಗಿತ್ತು. ಈಗ ಆಡಳಿತ ನಡೆಸುತ್ತಿರುವ ಸರ್ಕಾರ ಕೂಡ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಅಂತೆಯೇ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆಯಲ್ಲಿ ಸಂಚರಿಸಲು ಅವಕಾಶ ನೀಡಬೇಕು. ಬಸ್ ಇಲ್ಲದ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ನೆಲ್ಲಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜ್‍ನಿಂದ ಆರಂಭಗೊಂಡ ಮೆರವಣಿಗೆಯು ಪ್ರಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಹಶೀಲ್ದಾರ ಕಛೇರಿಗೆ ಅಂತ್ಯಗೊಂಡಿತ್ತು. ನಈ ಸಂಧರ್ಭದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‍ನ ಪದಾಧಿಕಾರಿಗಳು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

loading...