ಉಚಿತ ಬಸ್ ಪಾಸ್ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

0
12
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಪದವಿ, ವಿವಿದ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಹಿಂದಿನ ಸರ್ಕಾರ ತನ್ನ ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ತಕ್ಷಣ ವಿತರಿಸುಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫಡರೇಷನ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಅಶೋಕ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು. ಅತ್ಯಂತ ಹಿಂದುಳಿದ ಬಡ ವಿದ್ಯಾರ್ಥಿಗಳು ಸರಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಪಾಸ್ ವಿತರಣೆ ಮಾಡುತ್ತಿದ್ದು, 1 ನೇ ತರಗತಿಯಿಂದ ಪಿ.ಜಿ. ವರೆಗೂ ಎಲ್ಲ ವಿದ್ಯಾರ್ಥಿಗಳಿಗೂ ಇನ್ನೂ 3-4 ದಿನಗಳಲ್ಲಿ ಬಸ್‍ಪಾಸ್ ವಿತರಣೆ ಮಾಡಲು ಕೆ.ಎಸ್.ಆರ್.ಟಿ.ಸಿ. ಇಲಾಖೆ ಸಿದ್ದತೆ ನಡೆಸಿದ್ದು, ಕೂಡಲೇ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಸೂಚನೆ ಕೊಡಬೇಕೆಂದು ವಿದ್ಯಾರ್ಥಿ ಸಂಘ£ಟನೆಯ ಜಿಲ್ಲಾಧ್ಯಕ್ಷ ಅಮರೇಶ ಕಡಗದ್ ಹೇಳಿದರು.
ತ್ವರಿತವಾಗಿ ಬಸ್ ಪಾಸ್ ಗಳನ್ನು ನೀಡದಿದ್ದರೆ ತಾಲೂಕು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳೊಂದಿಗೆ ರಾಜ್ಯಾದ್ಯಾಂತ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಮುಖಂಡರಾದ ಅಮರೇಶ ಕಡಗದ್, ಹನಮಂತ ಮುಕ್ಕುಂಪಿ, ಶಿವಕುಮಾರ, ಸುಂಕಪ್ಪ ಗದಗ ಸೇರಿದಂತೆ ಇತರರು ಆಗ್ರಹ ಪಡಿಸಿದ್ದಾರೆ.

loading...