ಎಲ್ಲಾ ವರ್ಗದ ವಿಧ್ಯಾರ್ಥಿಗಳಿಗೆ ಬಸ್ ಪಾಸ್ ನೀಡ್ರಿ.. ಎಬಿವಿಪಿ ಒತ್ತಾಯ

0
48
loading...

ಎಲ್ಲಾ ವರ್ಗದ ವಿಧ್ಯಾರ್ಥಿಗಳಿಗೆ ಬಸ್ ಪಾಸ್ ನೀಡ್ರಿ.. ಎಬಿವಿಪಿ ಒತ್ತಾಯ

ಕನ್ನಡಮ್ಮಸುದ್ದಿ-ಬೆಳಗಾವಿ:ರಾಜ್ಯದ ಎಲ್ಲ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ನೀಡಬೇಕೆಂದು ಆಗ್ರಹಿಸಿ‌ ಮಂಗಳವಾರ ಎಬಿವಿಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ನೀಡಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ ಈಗೀನ ಸರಕಾರ ತಮ್ಮ ಪ್ರನಾಳಿಕೆಯಲ್ಲಿ ಘೋಷಣೆ ಮಾಡಿದ ಹಾಗೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿದರು.
ಸರಕಾರ ಎಲ್ಲ ಬಡ ,ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳು ನಗರ ಸಾರಿಗೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು ಹಾಗೂ ರಾಜ್ಯದಲ್ಲಿ ಕೆಲವೊಂದು ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆ ವಂಚಿತವಾಗಿದ್ದು ಅಂಥ ಪ್ರದೇಶದಲ್ಲಿ ಹೆಚ್ಚಿನ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ‌.

ಶಿವಾನಂದ ಸೈದಾಪೂರ, ಸಚೀನ, ರೋಹಿತ, ಭೀಮಸೇನ ಪಪ್ಪು, ಕಿಶೋರಿ ಪಾಟೀಲ, ಆಶಾ ಹೊಸಮನಿ, ಬಸವರಾಜ, ಮಹಾಂತೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...