ಕಾಂಗ್ರೆಸ್ ಪಕ್ಷಕ್ಕೆ ಎಸ್.ಆರ್ ಪಾಟೀಲ ಕೊಡುಗೆ ಅಪರ

0
12
loading...

ಬೀಳಗಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್ ಪಾಟೀಲರ ಕೊಡುಗೆ ಅಪರಾವಾಗಿದೆ. ಹಿರಿಯ ಹಾಗೂ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು. ಸಾಕಷ್ಟು ಅನುಭವ ಉಳ್ಳವರು. ಬದಾಮಿ ಕ್ಷೇತ್ರಮತದಿಂದ ಸ್ಪರ್ಧೆ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯನವರ ಗೆಲುವಿನ ರೂವಾರಿಯಾಗಿದ್ದಾರೆ. ಇವರಿಗೆ ಸಮಿಶ್ರ ಸರ್ಕಾರದ ಸಂಪುಟದಲ್ಲಿ ಉನ್ನತÀ ಸಚಿವಸ್ಥಾನ ನೀಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಎನ್ ಪಾಟೀಲ ಒತ್ತಾಯಿಸಿದ್ದಾರೆ. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲರು ಅವಳಿ ಜಿಲ್ಲೆಯಲ್ಲಿ ಉತ್ತಮವಾದ ಒಡನಾಟ ಹೊಂದಿದ್ದವರು. ವಿಧಾನ ಪರಿಷತ್ ಸದಸ್ಯರಾಗಿ ಅವಳಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಮಾಜಿ ಸಿಎಂ ಗೆಲುವಿಗಾಗಿ ಬದಾಮಿ ಕ್ಷೇತ್ರವನ್ನು ಬಿಟ್ಟು ಬೇರೆಡೆ ಹೋಗದೆ ಮಾಜಿ ಸಿಎಂ ಸಿದ್ರಾಮಯ್ಯನವರ ಗೆಲುವಿಗೆ ಸಾಕ್ಷಿಯಾಗಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ದಿಗೆ ಸಹಕಾರಿಯಾಗಲರಿವರಿಗೆ ಸಚಿವ ಸಂಪುಟದಲ್ಲಿ ಸಚಿವಸ್ಥಾನ ನೀಡಬೇಕು. ಅವರಿಗೆ ಸೂಕ್ತ ಸ್ಥಾನಮಾನ ದೊರೆಯದಿದ್ದರೆ ಅವಳಿ ಜಿಲ್ಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಿನ್ನಡೆಯಾಗಲಿದ್ದು, ಅವರ ವ್ಯಕ್ತಿತ್ವವನ್ನು ಗುರುತಿಸಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂದಿ ಹಾಗೂ ರಾಜ್ಯಾಧ್ಯಕ್ಷ ಜಿ ಪರಮೇಶ್ವರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯನವರು ಒಳ್ಳೆಯ ನಿಲುವು ತೊರಿ ಅವಳಿ ಜಿಲ್ಲೆಯ ಅಭಿವೃದ್ದಿಗೆ ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಆಧ್ಯತೆ ನೀಡಿ ಬಾಗಲಕೊಟೆ ಜೆಲ್ಲೆಯಿಂದ ಎಸ್ ಆರ್ ಪಾಟೀಲರಿಗೆ ಸಚಿವಸ್ಥಾನ ನೀಡಬೇಕು ಎಂದು ಹೇಳಿದರು.

loading...