ಕೆರಕಲಮಟ್ಟಿ : ವಿಶ್ವ ಪರಿಸರ ದಿನ ಆಚರಣೆ

0
20
loading...

ಬಾಗಲಕೋಟೆ : ಬಾದಾಮಿ ತಾಲೂಕಿನ ಕೆರಕಲಮಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಿ.ಬಿ.ಕಬಾಡದ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ಬೆಳೆಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಅರಣ್ಯ ಪಾಲಕ ಸಂತೋಷ ನಾಟಿಕಾರ, ಶಾಲಾ ಮುಖ್ಯೋಪಾದ್ಯಾಯ ಎನ್.ಎ.ಡೊಂಬರಪೇಟ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ಶಾಲಾ ಇಕೋಕ್ಲಬ್ ಸಂಚಾಲಕಿ ರೂಪಶ್ರೀ ಟಿ.ಎಸ್ ಸ್ವಾಗತಿಸಿದರು. ಸಿ.ಪಿ.ಹಲಗಲಿ ವಂದಿಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮುಕ್ತ ಪರಿಸರ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವ ಮೂಲಕ ಪರಿಸರ ಸಂರಕ್ಷಣೆಗೆ ಬಗ್ಗೆ ತಿಳುವಳಿಕೆ ನೀಡಲಾಯಿತು. ಸ್ಪರ್ಧೆಯಲ್ಲಿ ವಿಚೇತರಾದವರಿಗೆ ಬಹುಮಾನ ವಿತರಿಸಲಾಯಿತು.

loading...