ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ನನಗೆ ಬೇಕಿಲ್ಲ: ಹೊರಟ್ಟಿ

0
12
loading...

ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ನನಗೆ ಬೇಕಿಲ್ಲ: ಹೊರಟ್ಟಿ
ಕನ್ನಡಮ್ಮ ಸುದ್ದಿ-ಬೆಳಗಾವಿ:ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದರ ಬಗ್ಗೆ ಬೇಸರವಿದ್ದು,ವಿಧಾನ ಸಭೆಯಲ್ಲಿ ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ನನಗೆ ಬೇಕಿಲ್ಲವೆಂದು ಮಾಜಿ ಸಚಿವ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
ನಗರದ ಸದಾಶಿವ ನಗರದಲ್ಲಿ ನಿರ್ಮಾಣವಾಗುತ್ತಿರುವ ರಡ್ಡಿ ಸಮುದಾಯ ಭವನಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಜೆಡಿಎಸ್ ವರಿಷ್ಠರಾದ ದೇವೇಗೌಡರು ನನಗೆ ಸಭಾಪತಿ ಹುದ್ದೆ ನೀಡುವ ಬಗ್ಗೆ ಕಾರ್ಯಕರ್ತರ ಎದುರು ಹೇಳಿಕೊಂಡಿದ್ದಾರೆ. ಈ ಸಂಗತಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ ನಮ್ಮ ನಾಯಕರು ನನಗೇನು ಈ ವಿಷಯ ಹೇಳಿಲ್ಲ.
ಲಿಂಗಾಯತ ಸ್ವತಂತ್ರ್ಯ ಧರ್ಮ ಮಾನ್ಯತೆಗೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಲಿಂಗಾಯತ ಧರ್ಮಕ್ಕಾಗಿ ನಡೆದ ಹೋರಾಟದ ಬಗ್ಗೆ ಕೆಲ ಸ್ವಾಮೀಜಿಗಳಿಂದ ಅಪಪ್ರಚಾರ ನಡೆಯಿತು ಎಂದು ಸಚಿವ ಸ್ಥಾನ ಸಿಗದ ಹಿನ್ನೆಲೆ ಹೊರಟ್ಟಿ ಅಸಮಾಧಾನ ಹೊರಹಾಕಿದರು.

loading...