ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

0
32
loading...

ಬೆಳಗಾವಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಓರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ  ಇಂದು ಬೆಳಗ್ಗೆ ನಡೆದಿದೆ.
ನಗರದ ಅಮೃತ್ ಫಾರ್ಮಾಸಿಟಿಕಲ್ಸ್’ನ ಎಂ.ಡಿ ಶೈಲೇಶ್ ಜೋಶಿ (40) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಲಿವರ್ ತೊಂದರೆಯಿಂದ ಬಳಲುತ್ತಿದ್ದ‌ ಶೈಲೇಶ್ ನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆಯಲ್ಲಿದ್ದ ಲೈಸೆನ್ಸ್ ಹೊಂದಿರುವ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

loading...