ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ

0
17

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಅನಂತ್ ನಾಗ್ ಜಿಲ್ಲೆಯ ಖಿರಾಮ್ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಸ್ಥಳದಲ್ಲಿ ಅಡಗಿ ಕುಳಿತಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಪ್ರಸ್ತುತ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಉಗ್ರರಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 
ಉಗ್ರರ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ.ವೈದ್ ಅವರು, ಇಂದು ಬೆಳಿಗ್ಗೆ ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸಲಾಗಿತ್ತು. ಸ್ಥಳದಲ್ಲಿ 3-4 ಉಗ್ರರಿರುವುದಾಗಿ ಮಾಹಿತಿಗಳು ತಿಳಿದುಬಂದಿದ್ದವು. ಪ್ರಸ್ತುತ ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ ಎಂದು ಹೇಳಇದ್ದಾರೆ. 
ಸ್ಥಳಕ್ಕೆ ಹೆಚ್ಚುವರಿಯಾಗಿ ಮತ್ತಷ್ಟು ಭದ್ರತಾ ಪಡೆಗಳು ಆಗಮಿಸಿದ್ದು, ನಾಗರೀಕರಿಗೆ ಯಾವುದೇ ರೀತಿಯ ಅಪಾಯಗಳು ಎದುರಾಗದಂತೆ ಭದ್ರತೆಯನ್ನು ನೀಡುತ್ತಿದ್ದಾರೆ. 
ಈ ನಡುವೆ ವದಂತಿಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಸರ್ಕಾರ, ಅನಂತ್ ನಾಗ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. 
loading...