ಜಾಣ ಜಾಣೆಯರ ಬಳಗಕ್ಕೆ ಅರ್ಜಿ ಆಹ್ವಾನ

0
98
loading...

ಗದಗ : ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿತಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾ ಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತ್ತಕೋತ್ತರ ಕೇಂದ್ರದಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಕ ವಾತಾವರಣವನ್ನು ಕ್ರಿಯಾಶೀಲವಾಗಿರುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳುತ್ತದೆ. ಇದಕ್ಕಾತಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ. 5,000/- ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು. ಇದಲ್ಲದೇ ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಈ ಜಾಣ ಜಾಣೆಯರ ಬಳಗವನ್ನು ತೊಡಗಿಸಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಜೂ. 30 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ವಿವರಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ನಲ್ಲಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ , ಬೆಂಗಳೂರು- 560 002, ದೂರವಾಣಿ ಸಂಖ್ಯೆ 080-22107704 / 22484516 ಅವರಿಗೆ ಕಳುಹಿಸಿಕೊಡಲು ಕೋರಿದೆ.

loading...