ತವರಿಗೆ ಭೇಟಿ ನೀಡಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

0
16
loading...

ಮೈಸೂರು -ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಮತದಾರರಿಗಾಗಿ ಏರ್ಪಡಿಸಿರುವ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತರಾದ ಸಿದ್ದರಾಮಯ್ಯ, ಕಳೆದ ಒಂದು ತಿಂಗಳಿನಿಂದ ಮೈಸೂರಿಗೆ ಬಂದಿರಲಿಲ್ಲ. ಇದೇ ಮೊದಲ ಬಾರಿ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಕಳೆದ 5 ದಿನಗಳಿಂದ ಬಾದಾಮಿ ಕ್ಷೇತ್ರದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭಗಳಲ್ಲಿ ಭಾಗವಹಿಸಿದ್ದರು. ನಿನ್ನೆ ರಾತ್ರಿ ಹುಬ್ಬಳಿಯಲ್ಲಿ ವಾಸ್ತವ್ಯ ಹೂಡಿ ಇಂದು ಬೆಳಗ್ಗೆ ಹುಬ್ಬಳಿಯಿಂದ ವಿಶೇಷ ವಿಮಾನದಲ್ಲಿ ನೇರವಾಗಿ ಮೈಸೂರಿಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೂರ್ವ ನಿಗದಿಯಾದಂತೆ ಮೂರು ದಿನಗಳ ಕಾಲ ಮೈಸೂರಿನಲ್ಲಿ ವಾಸ್ತವ್ಯ ಹೂಡಿ ಚಾಮುಂಡೇಶ್ವರಿ ಕ್ಷೇತ್ರದ ಜನರನ್ನು ಭೇಟಿಯಾಗುವ ಕಾರ್ಯಕ್ರಮ ಇತ್ತು. ಆದರೆ, ದಿಢೀರ್ ಬದಲಾವಣೆಯಿಂದ ಸಿದ್ದರಾಮಯ್ಯ ಸೋಲಿನಿಂದ ಬೇಸರಗೊಂಡಿದ್ದು, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

loading...