ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ನಾಯ್ಕ

0
19
loading...

ಹೊನ್ನಾವರ: “ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು” ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು.
ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕು ಭೇಟಿ ನೀಡಿ ಊರಿನ ಸಮಸ್ಯೆ ಬಗ್ಗೆ ಆಲಿಸಿದ್ದು ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಹೊಸ ಹೊಸ ಯೋಜನೆಗಳ ಅನುಷ್ಟಾನಕ್ಕೇ ತರುವ ನಿಟ್ಟಿನಲ್ಲಿ ಕಾರ್ಯಪೃವೃತ್ತನಾಗಿದ್ದೇನೆ ಎಂದರು.

ಈ ಸಂದರ್ಬದಲ್ಲಿ ಉರನಾಗರಿಕರು ವಿದ್ಯುತ್ತ, ರಸ್ತೆ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳ ಬಗ್ಗೆ ಮನವಿ ಮಾಡಿದ್ದು, ಈ ಬಗ್ಗೆ ಶಾಸಕ ಸುನಿಲ್ ಪ್ರತಿಕ್ರಿಯಿಸಿ ನಿಮ್ಮ ಬೇಡಿಕೆಗಳನ್ನು ಹಂತಹಂತವಾಗಿ ಪೂರ್ಣಗೊಳಿಸುತ್ತೇನೆ ಅತ್ಯವಶ್ಯಕವಿರುವ ಸೌಕರ್ಯವನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು. ಈ ಸಂಧರ್ಭದಲ್ಲಿ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ನಾಯ್ಕ, ಬಿಜೆಪಿ ತಾಲೂಕಾ ಉಪಾದ್ಯಕ್ಷ ಗಣಪತಿ ನಾಯ್ಕ ಬಳ್ಕೂರು, ಶ್ರೀಧರ ನಾಯ್ಕ, ವಿಘ್ನೇಶ ಹೆಗಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

loading...