ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರಕ್ಕೆ ಸೂಚನೆ

0
9
loading...

ಗದಗ : ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಜನ ಜಾನುವಾರು ಹಾಗೂ ಬೆಳೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕೆಂದು ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ಆದಿತ್ಯ ಆಮ್ಲಾನ್ ಬಿಸ್ವಾಸ್ ಸೂಚಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ದಿ.6 ರಂದು ಕಾರ್ಮಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಕೃತಿ ವಿಕೋಪದಡಿ ಪ್ರವಾಹ ಪರಿಸ್ಥಿತಿಯಿಂದ ಹಾನಿಯ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ತೊಂದರೆಯಾಗದಂತೆ ಸಮರ್ಪಕ ದಾಸ್ತಾನು ಮಾಡಿಕೊಳ್ಳಲು ಸೂಚನೆ ನೀಡಿದರು. ಬಾರೀ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳ ವರದಿಯನ್ನು ಸಂಬಂಧಿತ ಅಧಿಕಾರಿಗಳು ಖುದ್ದಾಗಿ ಸಮೀಕ್ಷೆ ಮಾಡಿ ಹಾನಿಯ ಪರಿಹಾರ ಒದಗಿಸಬೇಕು.

ಅದೇ ರೀತಿ ಮಾನವ ಹಾಗೂ ಪ್ರಾಣಿಗಳ ಜೀವ ಹಾನಿಯಾದಲ್ಲಿಯೂ ಕೂಡ ವರದಿಯನ್ನು ತುರ್ತಾಗಿ ಪರಿಗಣಿಸಿ ಸಂಬಂಧಿತರಿಗೆ ಪರಿಹಾರ ಮೊತ್ತ ಒದಗಿಸಲು ಸೂಚನೆ ನೀಡಿದರು. ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಚರಂಡಿ ಹಾಗೂ ಸರಕಾರಿ ಕಟ್ಟಡಗಳ ದುರಸ್ತಿಗೆ ಕ್ರಮ ಜರುಗಿಸಲು ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಆದ ಹಾನಿಗೆ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಹಾ£ಗೊಳಗಾದ ಅರ್ಹ ಫಲಾನುಭವಿಗಳಿಗೆ ಆದಷ್ಟು ಬೇಗನೆ ವಿತರಿಸಲು ಕ್ರಮ ಜರುಗಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದಿತ್ಯ ಆಮ್ಲಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮನೋಜ್ ಜೈನ್, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಕೆ.ಸಂತೋಷ ಬಾಬು, ಜಿ.ಪಂ. ಸಿ.ಇ.ಓ ಮಂಜುನಾಥ ಚವ್ಹಾಣ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿ.ಪಂ. ಉಪಕಾರ್ಯದರ್ಶಿ ಎಚ್.ಸಿ. ಮಹೇಶ, ಗದಗ ಉಪ ವಿಭಾಗಾಧಿಕಾರಿ ಶ್ರೀಮತಿ ಗೀತಾ ಕೌಲಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

loading...