ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ : ನ್ಯಾ. ಶುಭ

0
21
loading...

ಯಲಬುರ್ಗಾ: ಬಾಲ್ಯ ಜೀವನ ಅತ್ಯಂತ ಅಮೂಲ್ಯವಾದದ್ದು,ಚಿಕ್ಕ ವಯಸ್ಸಿನಲ್ಲಿ ನಾವು ಬೆಳೆಸಿಕೊಂಡ ಸಂಸ್ಕಾರಗಳು ನಮ್ಮ ಮುಂದಿನ ಯಶಸ್ಸಿಗೆ ಸಹಕಾರಿಯಾಗಲಿದೆ.ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯವಶ್ಯಕವಾಗಿದೆ.ಬಾಲಕಾರ್ಮಿಕ ಪದ್ದತಿ ನಾಗರಿಕ ಸಮಾಜಕ್ಕೆ ಶಾಪ ಇದ್ದಂತೆ.ಈ ನಿಟ್ಟಿನಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರು ಶ್ರಮಿಸುವ ಮೂಲಕ ತಮ್ಮ ಮಕ್ಕಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಣ ಕೊಡಿಸಿ,ಸಮಾಜಕ್ಕೆ ತಮ್ಮ ಮಕ್ಕಳು ಮಾದರಿಯನ್ನಾಗಿ ಮಾಡುವಲ್ಲಿ ಪಾಲಕರು ಮುಂದೆ ಬರುವಂತೆ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶೆ ಶುಭ ಸಲಹೆ ನೀಡಿದರು.

ತಾಲೂಕ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೇಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಹಾಗೂ ಕಂದಾಯ, ಆರೋಗ್ಯ ಇಲಾಖೆ, ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಪಪಂ ಸಂಯುಕ್ತಾಶ್ರಯದಲ್ಲಿ ತಾಪಂ ಸಭಾಂಗಣದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚಾರಣೆ’ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರು ತಮ್ಮ ಮಕ್ಕಳಿಗೆ ಜನ್ಮ ನೀಡಿದರೆ ಸಾಲದು, ಅವರ ಜೀವನ ರೂಪಿಸಲು ಕನಿಷ್ಟ ಮಟ್ಟದ ಶಿಕ್ಷಣವನ್ನು ದೊರಕಿಸಲು ಪ್ರಯತ್ನಿಸಬೇಕು. ಅಂದಾಗ ಮಾತ್ರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ನಡೆಯುವ ಪ್ರತಿಯೊಂದು ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದಾ ಅವರು, ಸರಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ.ಆದರೆ ಪೋಷಕರು ಇದರ ಲಭವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಈ ನಿಟ್ಟಿನಲ್ಲಿ ಪಾಲಕರು ತಮ್ಮ ಜೀವನದಲ್ಲಿ ಏನೇ ಕಷ್ಟ ಬಂದರೂ ಸರಿ,ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಿ,ದುಡಿಯಲ್ಲಿಕ್ಕೆ ಮಾತ್ರ ಕಳುಹಿಸಿಕೊಡದೆ,ಅವರಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದೆ ಬರುವಂತೆ ಸಲಹೆ ನೀಡಿದ ಅವರು,ಬಲ ಕಾರ್ಮಿಕತೆಯನ್ನು ನಿವಾರಣೆಸಲು ಪೋಷಕರು ಸಹಕಾರ ಅತ್ಯಗತ್ಯ. ಎಂದರು.
ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಎಂ.ಈಶ್ವರ ಮಾತನಾಡಿ,ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರು ಶ್ರಮಿಸುವ ಮೂಲಕ ತಮ್ಮ ಮಕ್ಕಳನ್ನು ದುಡಿಯುವಕ್ಕೆ ಕಳುಹಿಸಿದೆ,ಶಿಕ್ಷಣವನ್ನು ಕೊಡಿಸುವದರೊಂದಿಗೆ ಅವರನ್ನು ವಿದ್ಯಾವಂತರನ್ನಾಗಿ ಮಾಡಿ,ಸಮಾಜದಲ್ಲಿ ಉತ್ತಮ ನಾಗರಿಕನ್ನಾಗಿ ಮಾಡುವಂತೆ ಸಲಹೆ ನೀಡಿದರು.

ತಹಶಿಲ್ದಾರ ಜಿ.ಎಸ್. ಹಿರೇಮಠ ಮಾತನಾಡಿ,ಸಮಾಜಿಕ ಪಿಡುಗು ಆಗಿರುವ ಬಾಲ ಕಾರ್ಮಿಕ ಮತ್ತು ಬಾಲ್ಯ ವಿವಾಹ ಪದ್ದತಿಯನ್ನು ನಿರ್ಮೂಲನೆ ಮಾಡಲು ಜನ ಜಾಗೃತಿ ಅವಶ್ಯವಾಗಿದೆ. ನಿರ್ಮೂಲನೆಗೆ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ, ಅನಿಷ್ಟ ಪದ್ದತಿಯನ್ನು ಹೋಗಲಾಡಿಸಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಲು ಮುಂದೆ ಬರುವಂತೆ ಸಲಹೆ ನೀಡಿದರು.
ತಾಪಂ ಇಓ ಕೆ.ತಿಮ್ಮಪ್ಪ,ಸಿಡಿಪಿಓ ಶರಣಮ್ಮ,ವಕೀಲರ ಸಂಘದ ಅಧ್ಯಕ್ಷ ಎಸ್.ಎನ್. ಶ್ಯಾಗೋಟಿ, ಪ.ಪಂ ಮುಖ್ಯಾಧಿಕಾರಿ ನಾಗೇಶ,ಅಪರ ಸರ್ಕಾರಿ ವಕೀಲ ಬಿ.ಎಮ್.ಶಿರೂರ,ಉಮೇಶ ಮೆಣಸಗೇರಿ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

loading...