ಮಳೆಗಾಲದ ಅವಘಡಕ್ಕೆ ಮುನ್ನ ಮುಂಜಾಗೃತಾ ಕ್ರಮ ಕೈಗೊಳ್ಳಿ: ಮೌಧ್ಗಿಲ್

0
42
loading...

ಕಾರವಾರ: ಈ ವರ್ಷದ ಮಳೆಗಾಲದಲ್ಲಿ ಸಂಭವಿಸಬಹುದಾದ ಅವಗಡಕ್ಕೆ ಮುನ್ನ ಜಿಲ್ಲಾಡಳಿತ ಮತ್ತು ಇತರೆ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಾ ನೋಡಲ್ ಕಾರ್ಯದರ್ಶಿ ಮನೀಶ್ ಮೌದ್ಗೀಲ್ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಮಳೆಗಾಲದಲ್ಲಿ ಸಂಬವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತದೊಂದಿಗೆ ಇತರೆ ಇಲಾಖೆಗಳು ಸಹಕಾರ ನೀಡಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗುವದರಿಂದ ಆರೋಗ್ಯ ಇಲಾಖೆ ಮತ್ತು ಸ್ಥಳಿಯ ಸಂಸ್ಥೆಗಳು ನೈರ್ಮಲ್ಯಕ್ಕೆ ಹೆಚ್ಚು ಒತ್ತು ಕೊಟ್ಟು ಕಾರ್ಯ ನಿರ್ವಹಿಸಬೇಕು ಎಂದರು ಜಿಲ್ಲಾಧಿಕಾರಿ ಎಸ್ ಎಸ್.ನಕುಲ್ ಅವರು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಕೈಗೊಳ್ಳಲಾಗುವ ಕ್ರಮಗಳ ಕುರಿತು ಮಾಹಿತಿ ನೀಡಿ ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಬವಾಗಿದ್ದು ಮುಂಜಗ್ರತಾ ಸುರಕ್ಷಾ ಕ್ರಮವಾಗಿ ಜಿಲ್ಲಾಡಳಿತದಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕ ಗುಡ್ಡಗಳಿರುವ ಸ್ಥಳಗಳಲ್ಲಿ ಗುಡ್ಡ ಕುಸಿದು ಜೀವಹಾನಿ ಸಂಭವಿಸದಂತೆ ಹೊನ್ನಾವರ ತಾಲೂಕಿನ ಕೆಳಗಿನೂರು, ಕರ್ಕಿ ಹಾಗೂ ಕುಮಟಾ ತಾಲೂಕಿನ ತಂಡ್ರಕುಳಿಯಲ್ಲಿ ಗುಡ್ಡದ ಸಮೀಪವಿರುವ ಉಟುಂಬಗಳನ್ನು ತಾತ್ಕಾಲಿಕವಾಗಿ 3-4 ತಿಂಗಳ ಅವಧಿಗೆ ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲು ಹಾಗೂ ಆ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ಧನ ಐಆರ್‍ಬಿ ಕಂಪನಿಯಿಂದ ನೀಡುವ ಕಾರ್ಯ ಪ್ರಗತಿಯಲ್ಲಿರುತ್ತದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಬವಿಸಬಹುದಾದ ಸ್ಥಳಗಳಲ್ಲಿ ಮುಂಚಿತವಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹಾಗೂ ಇದಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳಲು ಒಂದು ತಂಡವನ್ನು ರಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ತಿಳಿಸಲಾಗಿದೆ ಎಂದರು ಜಿಲ್ಲೆಯಲ್ಲಿ 2018-19ನೇ ಸಾಲಿನ ವರ್ಷದಲ್ಲಿ ಪ್ರಕೃತಿ ವಿಕೋಪದಡಿ ಎರಡು ಮಾನವ ಜೀವ ಹಾನಿಯಾಗಿದ್ದು, ಮೃತರ ವಾರಸುದಾರರಿಗೆ ಸರಕಾರದ ಮಾರ್ಗಸೂಚಿಯಂತೆ ತಲಾ 4 ಲಕ್ಷ ಪರಿಹಾರ ವಿತರಿಸಲಾಗಿದೆ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿದಿಯಿಂದ ತಲಾ 1 ಲಕ್ಷ ಪರಿಹಾರ ವಿತರಿಸುವ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗಿದೆ ಮತ್ತು ಒಟ್ಟು 198 ವಾಸದ ಮನೆಗಳು ಹಾನಿಯಾಗಿದ್ದು ಇವುಗಳಲ್ಲಿ 39 ಮನೆಗಳಿಗೆ ಒಟ್ಟು 1.75 ಲಕ್ಷ ಪರಿಹಾರ ವಿತರಿಸಲಾಗಿದೆ. ಉಳಿದ 116 ಮನೆಗಳಿU ಪರಿಹಾರ ವಿತರಿಸುವÉ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು. ಪಶುಸಂಗೋಪನಾ ಇಲಾಖೆಯ ಉಪನಿದೇಶಕರು ಮಾತನಾಡಿ ಜಿಲ್ಲೆಯಲಿ ಒಟ್ಟು 15 ಜಾನುವಾರುಗಳ ಜೀವ ಹಾನಿಯಾಗಿದ್ದು ಇದರಲ್ಲಿ ಒಟ್ಟು 10 ಜಾನುವಾರುಗಳ ಮಾಲಿಕರಿಗೆ 2.75 ಲಕ್ಷ ರೂ. ವಿತರಿಸಲಾಗಿದೆ. ಉಳಿದ ಜಾನುವಾರುಳ ಪರಿಹಾರ ವಿತರಣೆ ಪ್ರಗತಿಯಲ್ಲಿರುತ್ತದೆ ಎಂದರು.

loading...