ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಆಗ್ರಹ

0
19
loading...

ಗದಗ: ಆಡಳಿತಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಭರವಸೆಯನ್ನು ನೀಡಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅದಕ್ಕಾಗಿ 15 ದಿನಗಳ ಗಡುವು ಪಡೆಯುವ ಮೂಲಕ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಅನೀಲ ಮೆಣಸಿನಕಾಯಿ ಆರೋಪಿಸಿದ್ದಾರೆ.

ಗುರುವಾರ ಪತ್ರಿಕೆಗೆ ಹೇಳಿಕೆ ನೀಡಿದ ಅವರು, 104 ಸ್ಥಾನಗಳನ್ನು ಪಡೆದು ಬಿಜೆಪಿ ಸರಕಾರ ರಚನೆ ಮಾಡಿದ ಕೆಲವೇ ಸಮಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡುವುದರೊಂದಿಗೆ ರೈತ ಸಮುದಾಯದ ಬೆನ್ನಿಗೆ ಸದಾ ಬಿಜೆಪಿ ಪಕ್ಷವಿದೆ ಎಂಬ ಸಂದೇಶವನ್ನು ರವಾನಿಸಿದ್ದರು.
ರೈತ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಸರಕಾರ ರೈತರ ಸಾಲ ಮನ್ನಾ ಮಾಡಲು ಸ್ಥಿರ ಸರಕಾರ ರಚನೆಗೆ ಜನತೆ ಅವಕಾಶ ಕಲ್ಪಿಸಿಲ್ಲ ಎಂಬ ಕುಂಟು ನೆಪ ಹೇಳುತ್ತಿವೆ. ರಾಹುಲಗಾಂಧಿ ಕೃಪೆಯಿಂದಾಗಿ ಆಡಳಿತ ನಡೆಸುವ ಅವಕಾಶ ಸಿಕ್ಕಿದೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ 40 ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಯಿತು. 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡತಿನಿ ಎಂಬ ಹೇಳಿಕೆಯಿಂದಾಗಿ ಇಕ್ಕಟ್ಟಿಗೆ ಸಿಲುಕಿದ ಮುಖ್ಯಮಂತ್ರಿ ಅವರು ನೆಪಕ್ಕಾಗಿ ಅಧಿಕಾರಗಳ ಸಭೆ ನಡೆಸಿದ್ದಾರೆ. ತಜ್ಞರ ಸಮಿತಿ ರಚನೆ ಮಾಡುವದು. 2 ಹಂತದಲ್ಲಿ ರೈತರ ಸಾಲ ಮನ್ನಾ ಮಾಡುವ ಹುಸಿ ಭರವಸೆಯನ್ನು £ೀಡುತ್ತಿರುವದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಹಿಂದು-ಮುಂದು ಯೋಚಿಸದೇ ರೈತ ಏಳಿಗೆ ಬಗ್ಗೆ ಚಿಂತನೆ ಮಾಡಿದ ರೈತ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಾಮಾಜಿಕ ಕಳಕಳಿ ರೈತರಿಗೆ ಈಗಾಗಲೇ ಗೊತ್ತಾಗಿದೆ. ಆಡಳಿತ ನಡೆಸುತ್ತಿರುವವರೇ ಅಥವಾ ವಿರೋದ ಪಕ್ಷದಲ್ಲಿ ರೈತಪರ ಹೋರಾಟ ನಡೆಸುತ್ತಿರುವವರೇ ನಿಜವಾದ ರೈತ ನಾಯಕರೆಂಬ ಅರಿವು ನಾಡಿನ ರೈತರಿಗೆ ತಿಳಿದಿದೆ. ಸಮಯ ಬಂದಾಗ ದೋಸ್ತಿ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ.
ದೋಸ್ತಿ ಸರಕಾರವಿರಲಿ ಅಥವಾ ಸ್ಥಿರ ಸರಕಾರವಿರಲಿ ರೈತರ ಸಾಲ ಮನ್ನಾ ಮಾಡುವ ಮನಸ್ಸು ಇರಬೇಕು. ಅದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕಿದೆ. ಅವಸರದ ಹೇಳಿಕೆಯಿಂದ ತಪ್ಪಿಸಿಕೊಳ್ಳಲು ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿರುವು ದರಿಂದ ಅದು ಸಾಧ್ಯವಾಗುತ್ತಿಲ್ಲ ಎಂಬ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ರೈತರ ಸಾಲ ಮನ್ನಾ ಮಾಡುವ ತನಕ ರೈತ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಿರಂತರವಾಗಿ ಹೋರಾಟ ನಡೆಸಲಾಗುವದು ಎಂದು ಗದಗ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ತಿಳಿಸಿದ್ದಾರೆ.

loading...