ವಾಜಪೇಯಿ ಆರೋಗ್ಯದ ಬಗ್ಗೆ ವಿಚಾರಿಸಿದ ಪ್ರಧಾನಿ ಮೋದಿ

0
22
loading...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದರು . ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳು ಜೂನ್​ 11 ರಂದು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು.

ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 20 ನಿಮಿಷಗಳ ಕಾಲ ಅಲ್ಲಿದ್ದು ಆರೋಗ್ಯ ವಿಚಾರಿಸಿದರು.

ಈ ನಡುವೆ ಮಾಜಿ ಪ್ರಧಾನಿ ಆರೋಗ್ಯದ ಬಗ್ಗೆ ಮಾತನಾಡಿರುವ ಆಸ್ಪತ್ರೆ ವೈದ್ಯರು, ವಾಜಪೇಯಿ ಅವರ ಆರೋಗ್ಯದಲ್ಲಿ ದಿನದಿಂದ ದಿನಕ್ಕೆ ಚೇತರಿಕೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ. ಮೂತ್ರ ಪಿಂಡ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ನಿತ್ಯ ಡಯಾಲಿಸಿಸ್​ ಮಾಡಲಾಗುತ್ತಿದೆ.  2009ರಿಂದಲೇ ವಾಜಪೇಯಿ ಹಾಸಿಗೆ ಹಿಡಿದಿದ್ದು, ಹಾಸಿಗೆಯಲ್ಲಿಯೇ ಆರೈಕೆ ಮಾಡಲಾಗುತ್ತಿದೆ.

loading...