ವಿಕಲಚೇತನರನ್ನು ಕೀಳಾಗಿ ಕಾಣಬೇಡಿ: ಪರಣ್ಣ ಮುನವಳ್ಳಿ

0
19
loading...

ಗಂಗಾವತಿ: ವಿಕಲಚೇತನರಿಗೆ ಅನುಕಂಪ ತೋರಿಸುವದಕ್ಕಿಂತ ಅವಕಾಶಗಳನ್ನು ಹೆಚ್ಚಾಗಿ ಕಲ್ಪಿಸಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

ಭಾರತೀಯ ವೈದ್ಯಕೀಯ ಸಂಘ ಮತ್ತು ಲಯನ್ಸ್ ಕ್ಲಬ್ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೃತಕ ಕಾಲು ಜೋಡಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಕಲಚೇತನರ ಕುರಿತು ಅಸಹ್ಯ ಭಾವನೆ ಹೊಂದುವದು ತಪ್ಪು. ಅವರನ್ನು ಕೀಳಾಗಿ ಕಾಣಬಾರದು. ಅವರಲ್ಲಿ ಸಾಮಾನ್ಯ ಜನರಿಗಿಂತ ವಿಶೇಷ ಬುದ್ದಿಶಕ್ತಿ ಇರುತ್ತದೆ ಎಂದು ತಿಳಿಸಿದರು. ಪ್ರಮುಖ ಕ್ಷೇತ್ರಗಳಲ್ಲಿ ಅಂಗವಿಕಲರು ಅಗಾಧ ಸಾಧನೆಯನ್ನು ಮಾಡಿದ್ದಾರೆ. ಉನ್ನತ ಹುದ್ದೆಗಳಲ್ಲಿ ಸಹ ಅಂಗವಿಕರಲನ್ನು ನಾವು ಕಾಣುತ್ತೇವೆ ಎಂದು ಹೇಳಿದರು.

ಅಂಗವಿಕಲರಿಗಾಗಿ ಸರಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ ಇದರ ಪ್ರಯೋಜವನ್ನು ಪಡೆಯಬೇಕು ಎಂದು ತಿಳಿಸಿದರು. ಭಾರತೀಯ ವೈದ್ಯಕೀಯ ಸಂಘ ಮತ್ತು ಲಯನ್ಸ್ ಕ್ಲಬ್ ಅಂಗವಿಕಲರಿಗಾಗಿ ಈ ಶಿಬಿರನ್ನು ಏರ್ಪಡಿಸಿದ್ದು ಶ್ಲಾಘನೀಯತವಾಗಿದೆ. ಇಲ್ಲಿ ಉಚಿತವಾಗಿ ಕೃತಕ ಕಾಲುಗಳನ್ನು ಜೋಡಣೆ ಮಾಡುತ್ತಾರೆ ಎಂದು ತಿಳಿಸಿದರು.
ಲಯನ್ಸ್ ಅಧ್ಯಕ್ಷ ಡಾ.ಹನುಮಂತಪ್ಪ, ಡಾ.ಮಧುಸೂಧನ ಜೋಷಿ, ಡಾ.ಜಂಬುನಾಥಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಅಂಗವಿಕಲರ ಸಂಘದ ಅಧ್ಯಕ್ಷ ಮಂಜುನಾಥ ಹೊಸಕೇರಾ ಪಾಲ್ಗೊಂಡಿದ್ದರು.

loading...