ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಜಾಥಾ

0
29
loading...

ಕನ್ನಡಮ್ಮ ಸುದ್ದಿ-ಬಾಗಲಕೋಟೆ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಆಸ್ಪತ್ರೆಗೆ ತಲುಪಿತು. ಜಾಥಾದುದ್ದಕ್ಕೂ ಜೀವನ ಬೇಕು ತಂಬಾಕು ಬೇಡ, ತಂಬಾಕು ತ್ಯಜಿಸಿ ಆರೋಗ್ಯ ಜೋಪಾನ ಮಾಡಿಕೊಳ್ಳಿ, ತಂಬಾಕು ಸೇವನೆಯಿಂದ ಮುಕ್ತಿ, ಬಾಯಿ ಕ್ಯಾನ್ಸರ್‍ನಿಂದ ವಿಮುಕ್ತಿ, ನಿಮ್ಮ ಆಯ್ಕೆ ತಂಬಾಕಲ್ಲ ಆರೋಗ್ಯವಂತ ಜೀವನ ಸೇರಿದಂತೆ ಹಲವಾರು ಘೋಷಣೆಗಳನ್ನು ವಿದ್ಯಾರ್ಥಿಗಳು ಕೂಗಿದರು.

ಜಾಥಾದಲ್ಲಿ ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿ.ಪಂ ಸದಸ್ಯರಾದ ಸುಜಾತಾ ಸಿಂಗಾಡೆ, ಕರೆಹೊಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ತಾಲೂಕ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ, ದಂತ ವೈದ್ಯಾಧಿಕಾರಿ ಡಾ,ಜಯಂತ, ಜಿಲ್ಲಾ ಮೇಲ್ವಿಚಾರಕ ಸಿ.ಬಿ.ಸೋಲಾಪೂರ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ಬಳ್ಳಾರಿ ಸೇರಿದಂತೆ ನರ್ಸಿಂಗ್, ಎ.ಎನ್.ಎಂ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್ ರೋಗಿಗಳಿಗೆ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಮದ್ಯಾಹ್ನದ ವರೆಗೆ ರೋಗಿಗಳ ತಪಾಸಣೆ ಮಾಡಲಾಯಿತು.

loading...