ಸತೀಶ ಜಾರಕಿಹೊಳಿಗೆ ತಪ್ಪಿದ ಸಚಿವ ಸ್ಥಾನ:ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ

0
96
loading...

ಸತೀಶ ಜಾರಕಿಹೊಳಿಗೆ ತಪ್ಪಿದ ಸಚಿವ ಸ್ಥಾನ:ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ

ಕನ್ನಡಮ್ಮ ಸುದ್ದಿ-ಬೆಳಗಾವಿ:ಮಾಜಿ ಸಚಿವ ಹಾಲಿ ಶಾಸಕ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ಮತ್ತು ಅಭಿಮಾನಿ ಬಳಗದವರು ಇಂದು ಪ್ರತಿಭಟನೆ ನಡೆಸಿದರು.

ಬುದುವಾರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಅಭಿಮಾನಿಗಳು ಮತ್ತು ಬೆಂಬಲಿಗರು ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಕಾಂಗ್ರೆಸ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಸತೀಶ ಜಾರಕಿಹೊಳಿ ಅವರಿಗೆ ಅನ್ಯಾಯವಾಗಿದೆ ಈ ಕೂಡಲೇ ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ ಸತೀಶ ಜಾರಕಿಹೊಳಿ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

loading...