`ಸಮಗ್ರ ಕೃಷಿ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ

0
25
loading...

ನರಗುಂದ: ಕರ್ನಾಟಕ ಸರಕಾರದ ಕೃಷಿ ಇಲಾಖೆ ವತಿಯಿಂದ 2018-19 ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳವಾರ `ಸಮಗ್ರ ಕೃಷಿ ಅಭಿಯಾನ’ ಪ್ರಚಾರ ವಾಹನಕ್ಕೆ ಜಿಪಂ ಸದಸ್ಯೆ ರೇಣುಕಾ ಅವರಾದಿ ಹಸಿರು ಬಾವುಟ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಸದಸ್ಯ ವಸಂತ ಜೋಗಣ್ಣವರ, ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಂಚರಿಸಲು ಕೃಷಿ ಇಲಾಖೆಯಿಂದ ವಿಶೇಷ ಯೋಜನೆಯಡಿ ಹೊರತಂದ ಸಮಗ್ರ ಕೃಷಿ ಅಭಿಯಾನ ವಾಹನ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಕೃಷಿ ಕ್ಷೇತ್ರದಲ್ಲಿ ಮಹತ್ವದ ಯೋಜನೆಗಳಿದ್ದು ಇದರ ಪ್ರಯೋಜನ ರೈತರು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ಧೆಶಕ ಚನ್ನಪ್ಪ ಅಂಗಡಿ ಮಾತನಾಡಿ, ಜೂ. 6 ರಂದು ನರಗುಂದ ರೈತ ಸಂಪರ್ಕ ಕೇಂದ್ರದಲ್ಲಿ ಹಾಗೂ ಜೂ. 7 ರಂದು ಕೊಣ್ಣೂರ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಜರುಗಲಿವೆ. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ರೈತ ಮುಖಂಡರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಸರಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವರು. ಇದರ ಜೊತೆಗೆ ಕೃಷಿ ತಂತ್ರಜ್ಞಾನಗಳು ಹಾಗೂ ಮುಂಗಾರು ಬೆಳೆಗಳ ಸಾಗುವಳಿ ಬಗ್ಗೆ ಕೃಷಿ ವಿಜ್ಞಾನಿಗಳು ಉಪನ್ಯಾಸ ನೀಡುವರು ಮತ್ತು ರೈತರೊಂದಿಗೆ ಸಂವಾದ ನಡೆಸುವರು. ಇದೇ ಸಂದರ್ಭದಲ್ಲಿ ಇಲಾಖೆಯಿಂದ ನೀಡಲಾಗುವ ವಿವಿಧ ಸವಲತ್ತುಗಳನ್ನು ಶಾಸಕ ಸಿ.ಸಿ. ಪಾಟೀಲ ಸಾಂಕೇತಿಕವಾಗಿ ವಿತರಣೆ ಮಾಡಲಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಎನ್ ವಿ ಮೇಟಿ, ಉಪಾಧ್ಯಕ್ಷ ಸಣ್ಣಗದಿಗೆಪ್ಪ ತಳವಾರ, ರೈತ ಸಂಘದ ಶಹರ ಘಟಕದ ಅಧ್ಯಕ್ಷ ವಿಠ್ಠಲ ಜಾದವ, ಆರ್.ಜಿ. ಆಡೂರ, ಕೃಷಿ ಸಂಪರ್ಕ ಕೇಂದ್ರದ ಹಿರಿಯ ಸಯಾಯಕ ಅಧಿಕಾರಿ ಎಸ್.ಅರ್. ಭಜಂತ್ರಿ ಹಾಗೂ ಬಿಜೆಪಿಯ ಅನೇಕ ಮುಖಂಡರು ಭಾಗವಹಿಸಿದ್ದರು.

loading...