ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ.ವಿಜಯ್‌ಭಾಸ್ಕರ್ ನೇಮಕ

0
9
loading...

ಬೆಂಗಳೂರು:-ಕಳೆದ ಕೆಲವು ದಿನಗಳಿಂದ ಭಾರೀ ಕುತೂಹಲ ಕೆರಳಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಎಂ.ವಿಜಯ್‌ಭಾಸ್ಕರ್ ಅವರನ್ನು ಸೇವಾ ಹಿರಿತನದ ಆಧಾರದಲ್ಲಿ ರಾಜ್ಯಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಕೆ.ರತ್ನಪ್ರಭಾ ಅವರು ಇಂದು ನಿವೃತ್ತಿಯಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ರಾಜ್ಯ ಸರ್ಕಾರ ವಿಜಯ್‌ಭಾಸ್ಕರ್ ಅವರನ್ನು ನೇಮಿಸಿ ಅಧಿಕೃತ ಆದೇಶ ಹೊರಡಿಸಿದೆ.
ಕನ್ನಡದವರೇ ಆದ ವಿಜಯ್‌ಭಾಸ್ಕರ್ ೧೯೮೩ರಿಂದ ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿರುವ ಇವರ ಅವಧಿ ೨೦೨೦ರ ಡಿಸೆಂರ‍್ವರೆಗೂ ಇದ್ದು, ಅಲ್ಲಿಯವರೆಗೂ ಮುಖ್ಯ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಈಗಾಗಲೇ ೩೪ ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಸಂಪುಟ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕದ ಅಧಿಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೀಡಲಾಗಿತ್ತು. ಅದರಂತೆ ಅವರನ್ನು ಆಯ್ಕೆ ಮಾಡಲಾಗಿದೆ.

loading...