2025 ವೇಳೆಗೆ ಮಲೇರಿಯ ಮುಕ್ತ ಜಿಲ್ಲೆ : ವೆಂಕಟರಾಜಾ

0
19
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ಮಲೇರಿಯಾ ನಿವಾರಣೆ ಚೌಕಟ್ಟಿನ ಅನುಸಾರವಾಗಿ 2025 ವೇಳೆಗೆ ಕೊಪ್ಪಳ ಜಿಲ್ಲೆಯನ್ನು ಮಲೇರಿಯ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಹೇಳಿದರು.

ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಮಲೇರಿಯಾ ರೋಗದ ಹರಡುವಿಕೆ, ನಿಯಂತ್ರಣ ಹಾಗೂ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಹಾಗೂ ಜಿಲ್ಲಾ ಮಲೇರಿಯಾ ನಿವಾರಣಾ ಕಾರ್ಯಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಇಲಾಖೆಯವರು ಮಲೇರಿಯಾ ನಿಯಂತ್ರಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಸಹಭಾಗಿತ್ವ ನೀಡಬೇಕು. ನಗರ ಸಭೆ, ಪಟ್ಟಣ ಪಂಚಾಯತ್ ಪ್ರದೇಶಗಳ ಪರಿಸರದಲ್ಲಿ ಸೊಳ್ಳೆಗಳನ್ನು ನಿಯಂತ್ರಣಗೊಳಿಸಲು ಈಗಿರುವ ನಾಗರೀಕ ಬೈ-ಲಾ ಮತ್ತು ಕಟ್ಟಡ ಬೈ-ಲಾಗಳನ್ನು ಕಟ್ಟುನಿಟ್ಟಾಗಿ ಅನುಸ್ಟಾನಗೊಳಿಸಿ, ನಿಗದಿತ ವೇಳೆಯೊಳಗಾಗಿ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರಡ್ಡಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಅಲಕನಂದ ಮಳಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವಿರುಪಾಕ್ಷರೆಡ್ಡಿ ಎಸ್. ಮಾದಿನೂರ, ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರ ರಮೇಶ್ ಕೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಮ್.ಎಮ್ ಕಟ್ಟಿಮನಿ, ಡಾ. ಎಸ್.ಕೆ ದೇಸಾಯಿ, ಡಾ. ಜಂಬಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

loading...