ಅಪರಿಚಿತ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಸಾವು

0
24
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ನಗರದ ಶೇಕ್ ಹೋಮ್ಯುಯೊಪತಿಯ ಹತ್ತಿರದಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಜೂ.೧೯ರಂದು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.೩ರಂದು ನಿಧನ ಹೊಂದಿದ್ದಾನೆ.
ವ್ಯಕ್ತಿಯ ವಯಸ್ಸು ಸುಮಾರು ೫೦ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿ ದೊರತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಟಿಎಂ ಕೊಠಡಿಯಲ್ಲಿ ಶವವನ್ನು ಇಡಲಾಗಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...