ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

0
14
loading...

ನವದೆಹಲಿ: ಇಂದಿನಿಂದ (ಬುಧವಾರ)ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆಡಳಿತಾರೂಢ ಪಕ್ಷ ಹಾಗೂ ಪ್ರತಿಪಕ್ಷಗಳು ತಂತ್ರ-ಪ್ರತಿತಂತ್ರಗಳೊಂದಿಗೆ ಸದನ ಎದುರಿಸಲು ಸಜ್ಜಾಗಿವೆ.
ಬುಧವಾರ (ಇಂದಿನಿಂದ) ಆರಂಭವಾಗುತ್ತಿರುವ ಮುಂಗಾರು ಅಧಿವೇಶನದಲ್ಲೂ ಕಳೆದ ಬಾರಿಯಂತೆ ಗಲಾಟೆ, ಗದ್ದಲ ನಡೆಯುವ ಸಾಧ್ಯತೆ ಇದೆ. ಆಗಸ್ಟ್ 10ರ ವರೆಗೂ ಅಧಿವೇಶನ ನಡೆಯಲಿದ್ದು, ಹಲವು ವಿಷಯಗಳನ್ನೆತ್ತಿಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಗದ್ದಲು ಎಬ್ಬಿಸಲು ಸಿದ್ಧವಾಗಿವೆ.
ಅಧಿವೇಶನ ಆರಂಭಕ್ಕೆ ಮುನ್ನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಕಲಾಪ ಹಿನ್ನೆಲೆಯಲ್ಲಿ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು, ಪ್ರಧಾನಿ ಮೋದಿ ನೇತೃತ್ವದಲ್ಲಿ ಚರ್ಚಿಸಿದೆ. ಈ ಸಭೆಯಲ್ಲಿ ಆಡಳಿತಾರೂಢ ಎನ್‍ಡಿಎ ನಾಯಕರು, ಹಲವು ಪ್ರತಿಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.

loading...