ಇಮ್ರಾನ್ ಖಾನ್‍ಗೆ ಪ್ರಧಾನಿ ಮೋದಿ ದೂರವಾಣಿ ಕರೆ

0
11
loading...

ನವದೆಹಲಿ:ಪಾಕ್ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಲು ಮುಂದಾಗಿರುವ ಪಾಕಿಸ್ತಾನ ತೆಹ್ರಿಕ್
ಇ ಇನ್ಸಾಫ್(ಪಿಟಿಐ)ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್‍ಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ಪಾಕ್ ಚುನಾವಣೆಯಲ್ಲಿ ಪಿಟಿಐ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್‍ಗೆ ಮೋದಿ ಅಭಿನಂದನೆ ತಿಳಿಸಿದ್ದಾರೆ. ಇದೇ ವೇಳೆ ನೆರೆಯ ರಾಷ್ಟ್ರಗಳಲ್ಲಿ ಶಾಂತಿ ಕಾಪಾಡುವುದು ಹಾಗೂ ಅಭಿವೃದ್ಧಿಯ ಬಗ್ಗೆ ಮೋದಿ ಮಾತನಾಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಮತ್ತಷ್ಟು ಆಳವಾಗಿ ಬೇರೂರಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 25ರಂದು ನಡೆದ ಪಾಕ್ ಸಾರ್ವತಿಕ್ರ ಚುನಾವಣೆಯಲ್ಲಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಪಿಟಿಐ ಪಕ್ಷ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಆದರೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ನೀಡಿಲ್ಲ. ಆದರೆ ಪಕ್ಷೇತರರ ಬೆಂಬಲದಿಂದ ಇಮ್ರಾನ್ ಖಾನ್ ಆಗಸ್ಟ್ 11ರಂದು ಪಾಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

loading...