ಉಗ್ರರ ಎನ್‍ಕೌಂಟರ್: ಓರ್ವ ಯೋಧನಿಗೆ ಗಾಯ

0
6
loading...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್‍ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಸೇರಿದಂತೆ ಮೂವರು ನಾಗರಿಕರು ಗಾಯಗೊಂಡಿದ್ದಾರೆಂದು ಮಂಗಳವಾರ ತಿಳಿದು ಬಂದಿದೆ.
ಉಗ್ರರು ಅಡಗಿರುವ ಸುದ್ದಿ ತಿಳಿಯುತ್ತಿದ್ದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ.
ಸೇನೆಯ ಕಾರ್ಯಾಚರಣೆ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

loading...