ಉಪ್ಪಳ ಬಳಿ ಭೀಕರ ರಸ್ತೆ ಅಪಘಾತ, ಐವರು ಸ್ಥಳದಲ್ಲೇ ಸಾವು

0
17
loading...

ಕಾಸರಗೋಡು: ಲಾರಿ ಹಾಗೂ ಜೀಪಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಳದ ನಯಾಬಜಾರ್ ನಲ್ಲಿ ಸೋಮವಾರ ಸಂಭವಿಸಿದೆ.
ಜಿಲ್ಲೆಯ ಮಂಜೇಶ್ವರ ಸಮೀಪದ ಉಪ್ಪಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಜೀಪಿನಲ್ಲಿದ್ದ ಮೂವರು ಮಹಿಳೆಯರು, ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆಮುಸ್ತಾಕ್(41), ಇಮ್ತಿಯಾಝ್ (35), ಬೀಫಾತಿಮ್ಮ (65), . ಅಸ್ಮಾ(30), ನಸೀಮಾ(38) ಮೃತರು.
ಜೀಪ್ ನ ಟೈರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಮಂಜೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

loading...