ಕೀನ್ಯಾ ದೇಶದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಕೊಪ್ಪಳ ಸಿಇಒ ಭಾಗಿ

0
9
loading...

ಕನ್ನಡಮ್ಮ ಸುದ್ದಿ-ಕೊಪ್ಪಳ: ಶೌಚಾಲಯಗಳ ನಿರ್ಮಾಣ ಹಾಗೂ ಬಳಕೆ ಕುರಿತಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಹಲವು ಬಗೆಯ ತಂತ್ರಗಳನ್ನು ಅನುಸರಿಸಿ, ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಕೊಪ್ಪಳ ಜಿಲ್ಲೆಗೆ ಇದೀಗ ಮತ್ತೊಂದು ಗರಿ ಒದಗಿಬಂದಿದೆ.
ಸ್ವಚ್ಛತೆ ಮತ್ತು ಆರೋಗ್ಯ ಕುರಿತಂತೆ ಕೀನ್ಯಾ ದೇಶದಲ್ಲಿ ಜು.9 ರಿಂದ 13 ರವರೆಗೆ ಜರುಗುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಜಿಲ್ಲೆಯಲ್ಲಿನ ಯಶಸ್ವಿ ಶೌಚಾಲಯ ನಿರ್ಮಾಣ ಹಾಗೂ ಸ್ವಚ್ಛತೆಯ ಕ್ರಾಂತಿ ಕುರಿತು ವಿಶೇಷ ಉಪನ್ಯಾಸ ನೀಡಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‌ ರಾಜಾ ಅವರು ಭಾರತ ದೇಶದ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಕೀನ್ಯಾ ದೇಶದಲ್ಲಿರುವ ಲೊಗ್‌ಬೊರೋ ವಿಶ್ವವಿದ್ಯಾಲಯದಲ್ಲಿ ಜು. 09 ರಿಂದ 13 ರವರೆಗೆ ನಡೆಯಲಿರುವ ಯುನಿಸೆಫ್‌ನ 41 ನೇ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತ ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಲು ಜಿಪಂ ಸಿಇಓ ವೆಂಕಟ್‌ ರಾಜಾ ಅವರು ಆಯ್ಕೆಗೊಂಡಿದ್ದು, ಕೀನ್ಯಾ ದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಅವರಿಗೆ ಕಿನ್ಯಾ ದೇಶದಿಂದ ಅಧಿಕೃತ ಆಮಂತ್ರಣವು ಬಂದಿದೆ. ಯು.ಕೆ. ನ ಲೊಗ್‌ಬೊರೊ ವಿಶ್ವವಿದ್ಯಾಲಯ ಪ್ರತಿ ವರ್ಷ ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಆಯೋಜಿಸುತ್ತದೆ. ಈ ಬಾರಿಯ ಸಮ್ಮೇಳನ 41ನೇ ಯದಾಗಿದ್ದು, ಸುಮಾರು 40 ದೇಶಗಳಿಂದ 400 ವಿವಿಧ ತಜ್ಞರು, ವಿಷಯ ಪರಿಣಿತರು ಸಮ್ಮೇಳನದಲ್ಲಿ ಭಾಗವಹಿಸಿ, ತಮ್ಮ ವಿಷಯ ಮಂಡಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಕೊಪ್ಪಳದಂತಹ ಹಿಂದುಳಿದ ಜಿಲ್ಲೆಯಲ್ಲಿ ಸರ್ಕಾರ ಹಾಗೂ ಆಡಳಿತ ವರ್ಗವು ಸಾರ್ವಜನಿಕರ ಸಹಭಾಗಿತ್ವದಲ್ಲಿ ಆರೋಗ್ಯ ಹಾಗೂ ಸ್ವಚ್ಛತೆಯ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಲ್ಲಿ ಯಶಸ್ಸು ಕಂಡಿದೆ. ಕೊಪ್ಪಳ ಸಿಇಒ ವೆಂಕಟ್‌ರಾಜಾ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕೀನ್ಯಾ ದೇಶದಲ್ಲಿ ಜರುಗುವ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಆರೋಗ್ಯ ಹಾಗೂ ಸ್ವಚ್ಛತೆ ಕುರಿತಂತೆ ವಿಷಯ ಮಂಡಿಸಲು ಕೀನ್ಯಾಕ್ಕೆ ತೆರಳುತ್ತಿದ್ದು, ಜು. 9 ರಿಂದ 13 ರವರೆಗೆ ಐದು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ವಿವಿಧ ದೇಶಗಳ ಜನರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಯಶೋಗಾಥೆ ಹಾಗೂ ಎದುರಾದ ಸಮಸ್ಯೆಗಳ ಕುರಿತು ವಿವರಣೆ ನೀಡಲು ಸಿದ್ಧತೆ ಕೈಗೊಂಡಿದ್ದೇನೆ.
ವೆಂಕಟ್‌ರಾಜಾ ಸಿಇಓ ಜಿ.ಪಂ. ಕೊಪ್ಪಳ.

loading...