ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಲು ರಾಜ್ಯ ಸರಕಾರ ವಿಫಲ:ಅಂಗಡಿ

0
19
loading...

ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಲು ರಾಜ್ಯ ಸರಕಾರ ವಿಫಲ:ಅಂಗಡಿ

ಕನ್ನಡಮ್ಮ ಸುದ್ದಿ-ಬೆಳಗಾವಿ:ಕೇಂದ್ರ ಸರಕಾರ ಸುಮಾರು ೪೧ ಯೋಜನೆಗಳನ್ನು ನೀಡಿದೆ.ಆದರೆ ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಸದ್ಬಳಕೆ ಮಾಡುವಲ್ಲಿ ರಾಜ್ಯ ಸರಕಾರ ಹಾಗೂ ಸ್ಥಳೀಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದ ವಿರೋಧ ಪಕ್ಷದ ಕಾಂಗ್ರೆಸ್ ನೆಹರು ಪರಿವಾರವನ್ನು ಉನ್ನತಿಗೊಳಿಸುತ್ತಿದೆ. ರಾಜ್ಯದಲ್ಲಿ ದೇವೇಗೌಡರ ಪರಿವಾರ ಇವರಿಗೆ ದೇಶದ ಅಭಿವೃದ್ಧಿಗಿಂತ ಪರಿವಾರದ ಅಭಿವೃದ್ಧಿ ಮುಖ್ಯವಾಗಿದೆ ಎಂದರು.

ಕೇಂದ್ರದಿಂದ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದೆ. ಶೀಘ್ರದಲ್ಲಿ ರಾಜ್ಯದ ಎಪಿಎಂಸಿಗಳಲ್ಲಿ ರೈತರ ಬೆಳೆಗಳ ದರವನ್ನು ಸೂಚನಾ ಫಲಕವನ್ನು ಅಳವಡಿಸಬೇಕು ಎಂದರು.

ಈ ಸಂಧರ್ಭದಲ್ಲಿ ಮುಖಂಡರಾದ ರಾಜೇಂದ್ರ ಹರಕುಣಿ,ರಾಜು ಚಿಕ್ಕನಗೌಡರ,ಅಶೋಕ ಪೂಜೇರಿ ಇತರರು ಇದ್ದರು .

loading...