ಜನಸಂಖ್ಯೆ ಹೆಚ್ಚಳ ಅಭಿವೃದ್ಧಿಗೆ ಮಾರಕ : ಬಾಗವಾನ್

0
12
loading...

ಕನ್ನಡಮ್ಮ ಸುದ್ದಿ-ವಿಜಯಪುರ: ಶರವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಹಾಗೂ ಅಭಿವೃದ್ಧಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣ ಅವಶ್ಯಕವಾಗಿದೆ ಎಂದು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್.ಬಾಗವಾನ್ ಹೇಳಿದರು.
ತಾಲೂಕಾ ಪಂಚಾಯತ್, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಗೂ ಕಾಖಂಡಕಿ ಸರ್ಕಾರಿ ಪ್ರೌಢಶಾಲೆ ಇವರ ಆಶ್ರಯದಲ್ಲಿ ಕಾಖಂಡಕಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ ತಾಲೂಕಾ ಮಟ್ದ ವಿಶ್ವ ಜನಸಂಖ್ಯಾ ದಿನಾಚರಣೆ ಜನ ಜಾಗೃತಿ ರ‍್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಕರ್ನಾಟಕದಲ್ಲಿ ೨ ತಾಲೂಕಿನಷ್ಟು ಜನರು ಹೆಚ್ಚಾಗುತ್ತಿದ್ದಾರೆ. ಜನಸಂಖ್ಯೆ ಹೆಚ್ಚಳದಿಂದ ಮೂಲಭೂತ ಸೌಕರ್ಯಗಳ ಕೊರತೆ, ಅಪರಾಧ ಕೃತ್ಯಗಳ ಹೆಚ್ಚಳ, ವಾಯು, ಜಲ ಶಬ್ಧ ಮಾಲಿನ್ಯವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜನಸಂಖ್ಯೆ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜನಜಾಗೃತಿ ರ‍್ಯಾಲಿಗೆ ತಾಲೂಕಾ ಆರೋಗ್ಯಾಧಿಕಾರಿ ಡಾ.ಗುಂಡಬಾವಡಿ ಹಾಗೂ ಕಾಖಂಡಕಿ ಪ್ರೌಢಶಾಲೆಯ ಮುಖ್ಯೊÃಪಾಧ್ಯಾಯರು ಜಂಟಿಯಾಗಿ ಚಾಲನೆ ನೀಡಿದರು. ಕಾಖಂಡಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಸ್.ಕೆ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಕ್ಷೆÃತ್ರ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಬಿ. ಕಡಿಮನಿ, ಅಪ್ತ ಸಮಾಲೋಚಕ ಗೋಪಾಲ ರಬಕವಿ, ಹಿರಿಯ ಆರೋಗ್ಯ ಸಹಾಯಕರಾದ ಜೆ.ಎ.ಜಾಗೀರದಾರ, ಪ್ರೌಢಶಾಲೆ ಸಿಬ್ಬಂಎದಿ, ಗ್ರಾಮ ಪಂಚಾಯತ್ ಸದಸ್ಯರು, ಸ್ತಿçà ಶಕ್ತಿ ಸ್ವಸಹಾಯದ ಸಂಘದ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.

loading...