ಜೆಡಿಎಸ್‌ ಪ್ರಣಾಳಿಕೆಗೆ ಮಹತ್ವವಿಲ್ಲ: ಶಾಸಕ ಶೆಟ್ಟರ್‌

0
6
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ವಿದಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ನೀಡಿದ ಪ್ರಣಾಳಿಕೆಗೆ ಯಾವುದೇ ಮಹತ್ವ ಇಲ್ಲ ಎಂಬುದನ್ನು ಕುಮಾರಸ್ವಾಮಿ ಅವರೇ ಸಾಬೀತು ಪಡಿಸಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ, ವೃದ್ದಾಪ್ಯ ವೇತನ 600 ರಿಂದ 6 ಸಾವಿರಕ್ಕೆ ಏರಿಕೆ, ರೈತರ ಸಾಲ ಮನ್ನಾ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಣಾಳಿಕೆಯಲ್ಲಿ ಹೇಳಿದ್ದರು. ಅವರ ಪ್ರಣಾಳಿಕೆಗೆ ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎಂದು ಆರೋಪಿಸಿದರು. ಜನರಿಗೆ ಮೋಸ ಮಾಡಿದ್ದಾರೆ. ಯಾವುದೇ ಪ್ರಣಾಳಿಕೆನ್ನು ಇಡೆರಿಸದೇ ದುರಾದೃಷ್ಟಕರವಾಗಿದೆ ಎಂದು ಹೇಳಿದರು.

loading...