ತರಬೇತಿ ಕೇಂದ್ರಕ್ಕೆ ಬಸವರಾಜ ಹೊರಟ್ಟಿ ಭೇಟಿ

0
7
loading...

ವಿಜಯಪುರ : ತಾಲೂಕಿನ ಬುರಾಣಪೂರದಲ್ಲಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ವತಿಯಿಂದ ನಿರ್ಮಿಸಲಾಗಿರುವ ತರಬೇತಿ ಕೇಂದ್ರಕ್ಕೆ ವಿಧಾನ ಪರಿಷತ್‌ ಉಪ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೊರಟ್ಟಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿ ಕೇಂದ್ರಕ್ಕೆ ಹೆಚ್ಚಿನ ಅನುದಾನ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ, ಧೈರ್ಯ, ಸಾಹಸವನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ. ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡರೆ ಉತ್ತಮ ನಾಗರಿಕರಾಗಿ, ಉತ್ತಮ ನಾಯಕರಾಗಿ ರೂಪುಗೊಳ್ಳಲು ಸಾಧ್ಯ ಎಂದರು. ಅದರಲ್ಲೂ ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿಗಾಗಿಯೇ ಈ ವಿಶೇಷ ಕೇಂದ್ರ ಆರಂಭಿಸಿರುವುದು ಸಂತೋಷದ ಸಂಗತಿ. ಸುತ್ತಲೂ ಗಿಡ-ಮರಗಳನ್ನು ನೆಟ್ಟು ಪರಿಸರ ರಕ್ಷಣೆಯ ಕಾರ್ಯ ಕೈಗೊಂಡಿರುವುದು ಶ್ಲಾಘನೀಯ ಎಂದು ತಿಳಿಸಿದರು. ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿ ಹಿನ್ನೆಲೆಯಲ್ಲಿ ಸಿದ್ಧಪಡಿಸಲಾಗಿರುವ ಕೇಂದ್ರದಲ್ಲಿರುವ ಮೂಲಸೌಕರ್ಯ, ಆವರಣದಲ್ಲಿ ಸಸಿ ನೆಡುವ ಕಾರ್ಯವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ಕೋಶಾಧ್ಯಕ್ಷ ಸಹಜಾನಂದ ದಂಧರಗಿ, ಚಂದ್ರಕಾಂತ ಲೋಣಿ, ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಇದ್ದರು.

loading...