ದೋಸ್ತಿ ಸರ್ಕಾರಕ್ಕೆ ತಲೆನೋವು

0
11
loading...

ಬೆಂಗಳೂರು: 2019ರ ಲೋಕಸಭಾ ಚುನಾವಣಾ ಪೂರ್ವಮೈತ್ರಿಯಿಂದ ಕಾಂಗ್ರೆಸ್‍ಗಿಂತ ಜೆಡಿಎಸ್‍ಗೆ ಹೆಚ್ಚಿನ ಲಾಭವಾಗಲಿದ್ದು, ಮತಗಳ ಕ್ರೂಢೀಕರಣ ಲೆಕ್ಕಾಚಾರದಲ್ಲೂ ಮತ್ತೆ ಕಾಂಗ್ರೆಸ್‍ಗೆ ತೊಂದರೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಲೋಕಸಭಾ ಚುನಾವಣಾ ಪೂರ್ವ ಮೈತ್ರಿಗೆ ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಸಂಸದರು ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಮೈತ್ರಿ ಸರ್ಕಾರಕ್ಕೆ ಹೊಸ ಸಂಕಷ್ಟ ಎದುರಾಗಿದೆ. ಬಜೆಟ್ ಅಧಿವೇಶನದ ನಂತರ ಮಹತ್ವದ ರಾಜಕೀಯ ಬೆಳವಣಿಗೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜೆಡಿಎಸ್‍ನೊಂದಿಗೆ ಲೋಕಸಭಾ ಚುನಾವಣಾ ಪೂರ್ವ ಮೈತ್ರಿ ಬೇಡ. ಮೈತ್ರಿ ಸರ್ಕಾರ ಮಾತ್ರವಿರಲಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಸಂಸದ ಚಂದ್ರಪ್ಪ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಮೊದಲೇ ಸಂಸದರ ಸಭೆ ನಡೆಸಿ ಚುನಾವಣಾ ಪೂರ್ವ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

loading...