ಪಾಕ್‍ನಲ್ಲಿ ಬಾಂಬ್ ಸ್ಪೋಟ: ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ

0
12
loading...

ಲಾಹೋರ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ನಿಮಿತ್ತ ಬಲೂಚಿಸ್ಥಾನದಲ್ಲಿ ನಡೆಯುತ್ತಿದ್ದ ಚುನಾವಣಾ ರ್ಯಾಲಿ ಮೇಲೆ ಭಯೋತ್ಪಾದಕರು ನಡೆಸಿದ್ದ ಬಾಂಬ್ ದಾಳಿಯಲ್ಲಿ 120ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿದ್ದು, ಬಾಂಬ್ ಸ್ಫೋಟದ ಬಳಿಕ ಗಂಭೀರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳ ಪೈಕಿ ಹಲವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಾಗಲೂ ಕೆಲ ಜನರು ಸಾವನ್ನಪ್ಪಿದ್ದು, 120 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಇನ್ನು ಈ ದಾಳಿಯಲ್ಲಿ ಗಾಯಂಗಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

loading...