ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ದೆಹಲಿ ಸಿಂ

0
6
loading...

ನವದೆಹಲಿ: ಹಿಂದೂ-ಮುಸ್ಲಿಂ ಬಾಂಧವ್ಯದಿಂದ ಮಾತ್ರ ಭಾರತ ನಂಬರ್ 1 ಆಗುವುದೇ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಭಾನುವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅಜಂಘಡ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷ ಕೇವಲ ಮುಸ್ಲಿಮರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ಎಂದು ಟೀಕಿಸಿದ್ದರು.
ಪ್ರಧಾನಿ ಮೋದಿ ಟೀಕೆಗೆ ದೆಹಲಿ ಸಿಎಂ ಅರವಿಂಜ್ ಕೇಜ್ರಿವಾಲ್ ತಿರುಗೇಟು ನೀಡಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳ ಬಳಿಕವೂ ಪ್ರಧಾನಿ ಮೋದಿ ಹಿಂದೂ-ಮುಸ್ಲಿಂ ಸಮಸ್ಯೆಗಳ ಕುರಿತು ಮಾತನಾಡುತ್ತಿದ್ದಾರೆ ಎಂದರೆ ಅವರ ಸಾಧನೆ ಏನು ಎಂದು ಪ್ರಶ್ನಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡುತ್ತಿತ್ತು ಎಂದು ಟೀಕಿಸಿದ್ದಾರೆ.
ಇಂದೋರ್ ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ಪ್ರಧಾನಿ ಮೋದಿ ಅವರ ಮಾತು ಕೇಳಿದರೆ ಅವರ ಸರ್ಕಾರ ಇನ್ನೂ ಯಾವ ಕೆಲಸವನ್ನೂ ಮಾಡಿಲ್ಲ ಎಂದೆನಿಸುತ್ತಿದೆ. ತ್ರಿವಳಿ ತಲಾಖ್ ಬಗ್ಗೆ ತಮ್ಮ ಸಾಧನೆಯ ಬಗ್ಗೆ ಮಾತನಾಡುವ ಮೋದಿ, ತಮ್ಮದೇ ಪಕ್ಷ ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ತ್ರಿವಳಿ ತಲ್ಲಾಖ್‍ಗೆ ಬೆಂಬಲ ನೀಡಬಹುದಿತ್ತು, ಅಂದು ಬೆಂಬಲ ನೀಡದೇ ತಮ್ಮ ರಾಜಕೀಯ ಲಾಭಕ್ಕಾಗಿ ಅದನ್ನು ಬಿಜೆಪಿ ಬಳಸಿಕೊಂಡಿತು ಎಂದು ಪ್ರಧಾನಿ ಮಾತಿಗೆ ತಿರುಗೇಟು ನೀಡಿದ್ದಾರೆ.

loading...