ಬಸ್‍ಪಾಸ್‍ಗೆ ಆಗ್ರಹಿಸಿ ಬಸ್ ನಿಲ್ದಾಣಕ್ಕೆ ಮುತ್ತಿಗೆ

0
18
loading...

ಕನ್ನಡಮ್ಮ ಸುದ್ದಿ-ಗಂಗಾವತಿ: ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಯೋಜನೆ ತೀವ್ರ ಅನುಷ್ಠಾನಗೊಳಿಸಲು ಒತ್ತಾಯಿಸಿ ಭಾರತವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರೆ, ಕ್ಯಾಂಪಸ್ ಫ್ರಂಟ್ ಆಪ್ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.
ನೇತೃತ್ವವಹಿಸಿಕೊಂಡಿದ್ದ ಎಸ್‍ಎಫ್‍ಐ ಜಿಲ್ಲಾ ಅಧ್ಯಕ್ಷ ಅಮರೇಶ ಕಡಗದ ಮಾತನಾಡಿ, ಬಜೆಟ್‍ನಲ್ಲಿ ಘೋಷಿಸಿರುವಂತೆ ಉಚಿತ ಬಸ್‍ಪಾಸ್ ಯೋಜನೆಯನ್ನು ಅನುಷ್ಠಾನಗೊಳಿಸದ ರಾಜ್ಯದಲ್ಲಿನ ಸಮ್ಮಿಶ್ರ ಸರಕಾರ ವಿದ್ಯಾರ್ಥಿ ವಿರೋಧಿ ನಿಲುವು ತಾಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೆ ಬಸ್‍ಪಾಸ್ ನೀಡಬೇಕು. ಕೆಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆ ಅನ್ವಯಿಸುವ ಕಾರಣದಿಂದ ವಿದ್ಯಾರ್ಥಿಗಳಲ್ಲಿ ತಾರತಮ್ಯ ಉಂಟಾಗುತ್ತದೆ ಎಂದು ತಿಳಿಸಿದರು. ಶೀಘ್ರದಲ್ಲಿ ಬಸ್ ಪಾಸ್ ನೀಡದಿದ್ದರೆ ಎಸ್‍ಎಫ್‍ಐ ಸಂಘಟನೆ ಉಗ್ರರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಕ್ಯಾಂಪಸ್ ಫ್ರಂಟ್:ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾ ಅಧ್ಯಕ್ಷ ಸೈಯದ್ ಸರ್ಫರಾಜ್, ಜಿ.ಟಿ.ನಾಗರಾಜ, ಅಫ್ಜಲ್, ಫರೋಜ್, ಇಮ್ರಾನ್, ಚಾಂದ್ ಪಾಲ್ಗೊಂಡಿದ್ದರು.

loading...