ಬಹಿರ್ದೆಸೆ ಮುಕ್ತ ಕೊಪ್ಪಳ ಜಿಲ್ಲೆ: ಸಿಇಒ

0
10
loading...

ಕನ್ನಡಮ್ಮ ಸುದ್ದಿ-ಕೊಪ್ಪಳ: ಹೈದರಾಬಾದ ಕರ್ನಾಟಕ ಭಾಗಗಳ ಜಿಲ್ಲೆಗಳಲ್ಲಿ ಕೊಪ್ಪಳವು ಬಯಲು ಬಹಿರ್ದೆಸೆ ಮುಕ್ತ ಮೊಟ್ಟ ಮೊದಲ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ 1ಲಕ್ಷ 46 ಸಾವಿರಕ್ಕೂ ಅಧಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ವ, ನೌಕರರ ಸಂಘ, ಜಿಲ್ಲಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆದ ಸನ್ಮಾನ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲರ ಸಾಂಗಿಕ ಪ್ರಯತ್ನದಿಂದ ಜಿ.ಪಂ. ಕಾರ್ಯವು ಯಶಸ್ವಿಯಾಗಿದ್ದು, ಇದರ ಪ್ರತಿ ಫಲವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯು ಗಮನ ಸೆಳೆದಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಸಮಾರಂಭದ ಮುಖಾಂತರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅನುಪ ಶೆಟ್ಟಿ, ಪ್ರೊಬೆಷನರಿ ಐಎಎಸ್‌ ಅಧಿಕಾರಿ ಅಕ್ಷಯ್‌ ಶ್ರೀಧರ್‌, ಜಿ.ಪಂ. ಕಾರ್ಯದರ್ಶಿ ಎನ್‌.ಕೆ ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸಹಾಯಕ ನಿದೇಶಕ ಶರಣಬಸಪ್ಪ, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ವ, ನೌಕರರ ಸಂಘದ ರಾಜ್ಯಾಧ್ಯಕ್ಷ ಶರಣಯ್ಯ ಸಸಿಮಠ, ಜಿಲ್ಲಾಧ್ಯಕ್ಷ ವೆಂಕಟೇಶ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ ಸೇರಿದಂತೆ ತಾ.ಪಂ. ಅಧಿಕಾರಿಗಳು ಹಾಗೂ ಜಿಲ್ಲಾ ಆರ್‌.ಡಿ.ಪಿ.ಆರ್‌ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

loading...