ಬಿಜೆಪಿಯವ್ರೇ ಉತ್ತರ ಕರ್ನಾಟಕಕ್ಕೆ ಏನ್ ಕೊಟ್ರಿ?

0
7
loading...

ಬೆಂಗಳೂರು:ಅಖಂಡ ಕರ್ನಾಟಕ, ಏಕೀಕರಣ ಹೋರಾಟದ ಬಗ್ಗೆ ಗೊತ್ತಿಲ್ಲದವರು ಪ್ರತ್ಯೇಕ ರಾಜ್ಯ ಬೇಕು ಎಂದು ಕೇಳುತ್ತಿದ್ದಾರೆ.ಇದು ಮೂರ್ಖರ ವಾದ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಪ್ರತ್ಯೇಕ ರಾಜ್ಯದ ಕುರಿತು ಪ್ರತಿಕ್ರಿಯಿಸಿದ ಅವರು,ನಾನು ಸಿಎಂ ಆಗಿದ್ದಾಗ ಉತ್ತರ ಕರ್ನಾಟಕಕ್ಕೆ ಕೋಟ್ಯಾಂತರ ರೂ ಹಣ ನೀಡಿದ್ದೇನೆ. ಉತ್ತರ ಕರ್ನಾಟಕ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿದ್ದೇನೆ. ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಏನ್ ಕೊಟ್ರಿ ಎಂದು ಪ್ರಶ್ನಿಸಿದರು.
ಈಗ ಪ್ರತ್ಯೇಕ ರಾಜ್ಯ ಕೇಳುತ್ತಿದ್ದಾರೆ. ಹಿಂದುಳಿದ ಪ್ರದೇಶದ ಅಭಿವೃದ್ದಿಗೆ ಕೇಂದ್ರದ ಕೊಡುಗೆ ಶೂನ್ಯ. ಬಿಜೆಪಿಯವರು ಅಧಿಕಾರ ದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ಕೊಟ್ಟಿಲ್ಲ. ಉಮೇಶ್ ಕತ್ತಿ ಸೇರಿ ಅಲ್ಲಿನ ನಾಯಕರು ಉತ್ತರ ಕರ್ನಾಟಕಕ್ಕೆ ಏನು ಮಾಡಿಲ್ಲ ಎಂದು ಆರೋಪಿಸಿದರು.

loading...