ಮಣಿಪುರದಲ್ಲಿ ಭೂ ಕುಸಿತ

0
25
loading...

ಗುವಾಹಣಿ:  ಮಣಿಪುರದಲ್ಲಿ ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಪರಿಣಾಮ 7 ಮಕ್ಕಳು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ ತಮೆಂಗ್’ಲೊಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಭೂ ಕುಸಿತದ ಪರಿಣಾಮ ನ್ಯೂ ಸಲೇಮ್ ಮತ್ತು ನಿಗೆಲುವಾಂಗ್ ಗ್ರಾಮದಲ್ಲಿರುವ ಕೆಲ ಮನೆಗಳು ಕುಸಿದು ಬಿದ್ದಿದ್ದು, ಈ ಹಿನ್ನಲೆಯಲ್ಲಿ ಸ್ಥಳದಲ್ಲಿದ್ದ 7 ಮಕ್ಕಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಒಂದು ಘಟನೆಯಲ್ಲಿ ಒಂದೇ ಕುಟುಂಬದ ಐವರು ಮಕ್ಕಳು ಸಾವನ್ನಪ್ಪಿದ್ದರೆ, ಮತ್ತೊಂದು ಘಟನೆಯಲ್ಲಿ ಮಣ್ಣು ಮಿಶ್ರಿತ ನೀರಿನಲ್ಲಿ ಹೋಗುತ್ತಿದ್ದ ವೇಳೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ ತಾಯಿ ಮತ್ತು ಮಗ ಮಲಗಿದ್ದ ಸಂದರ್ಭದಲ್ಲಿ ಮನೆಗೆ ಕುಸಿದ ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತಮೆಂಗ್ಲಾಂಗ್ ಡಿಸಿ ರವೀಂದರ್ ಸಿಂಗ್ ಅವರು, ಭೂಕುಸಿತ ಸಂಭವಿಸಿರುವ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮಣಿಪುರ ಸೇರಿ ಇಲ್ಲಿನ ಈಶಾನ್ಯ ಪ್ರದೇಶಗಳಲ್ಲಿ ಹಲವು ದಿನಗಳಿಂದಲೂ ಭಾರೀ ಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

loading...