ಮಳೆಗೆ ಉತ್ತರಾಖಂಡ ತತ್ತರ

0
9
loading...

ಉತ್ತರಾಖಂಡ: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಧಾನಿ ಡೆಹರಾಡೂನ್ ನಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲು ಆದೇಶಿಸಲಾಗಿದೆ.
ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹಲವು ಸೇತುವೆಗಳು ಕೊಚ್ಚಿ ಹೋಗಿವೆ. ಮುಂದಿನ ಮೂರು ದಿನಗಳು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡೆಹ್ರಾಡೂನ್ ನಲ್ಲಿ ಕಟ್ಟಡ ಕುಸಿದು ನಾಲ್ವರು ಮೃತ ಪಟ್ಟಿದ್ದು, ದಲನ್ ವಾಲಾ, ಶಹಸಾ ಪುರ ಮತ್ತು ಬಲ್ಲಿವಾಲದಲ್ಲಿ ತಲಾ ಒಬ್ಬೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

loading...