ಮಳೆಗೆ ನಲುಗಿದ ವಾಣಿಜ್ಯ ನಗರಿ ಮುಂಬೈ

0
6
loading...

ಮುಂಬೈ: ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆÀಯಿಂದ ವಾಣಿಜ್ಯ ನಗರಿ ಮುಂಬೈನಲ್ಲಿ ಪಶ್ಚಿಮ ರೈಲ್ವೆಯ ಉಪನಗರ ಸೇವೆ ಸ್ಥಗಿತಗೊಂಡಿದೆ. ಎಂದು ಪಶ್ಚಿಮ ರೈಲ್ವೆ ವಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ರಾತ್ರಿಯಿಂದ ಮುಂಬೈ ನಗರ ಸುತ್ತಮುತ್ತ 200 ಮಿಲಿಮೀಟರ್ ಗೂ ಅಧಿಕ ಮಳೆ ಸುರಿದಿದ್ದು ರೈಲ್ವೆ ಹಳಿಗಳಲ್ಲಿ ನೀರು ನಿಂತುಕೊಂಡಿದೆ. ಪ್ರಯಾಣಿಕರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ನೀರಿನ ಮಟ್ಟ ಕಡಿಮೆಯಾಗುವವರೆಗೆ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದರೂ ಕೂಡ ನಾವು ಅನಿಯಮಿತ ಸೇವೆ ಸಲ್ಲಿಸುತ್ತಿದ್ದೇವೆ. ರೈಲ್ವೆ ಸಂಚಾರದ ಬಗ್ಗೆ ಜನರಿಂದ ಹಲವು ಮೆಸೇಜ್‍ಗಳು, ಟ್ವಿಟ್‍ಗಳು ಬರುತ್ತಿವೆ. ಕೇಂದ್ರ ರೈಲ್ವೆ ವಲಯದ ಮೇಲೆ ಜನರು ಇಟ್ಟಿರುವ ನಂಬಿಕೆ, ವಿಶ್ವಾಸ, ಬೆಂಬಲದಿಂದ ನಾವು ಆಭಾರಿಯಾಗಿದ್ದೇವೆ ಎಂದು ಟ್ವಿಟ್ ಮಾಡಿದೆ. ನಿರಂತರ ಮಳೆಯಿಂದಾಗಿ ವಾಣಿಜ್ಯ ನಗರಿಯ ಜನರು ನಲುಗುವಂತಾಗಿದೆ.

loading...