ಮಳೆಗೆ ವಾಣಿಜ್ಯ ನಗರಿ ಮುಂಬೈ ಹೈರಾಣು

0
18
loading...

ಮುಂಬೈ: ವರುಣನ ಅಬ್ಬರದಿಂದ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಮಹಾನಗರದ ರಸ್ತೆಗಳು ನದಿಗಳಾಗಿ ಪರಿವರ್ತನೆಗೊಂಡಿದ್ದು, ವಾಹನ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಭಾನುವಾರತ ರಾತ್ರಿ ಆರಂಭವಾದ ಮಳೆ ಸೋಮವಾರ ಬೆಳಗ್ಗೆ ಕೂಡ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಮುಂಬೈನಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ರೈಲು ಸಂಚಾರವನ್ನು ನಿಲ್ಲಿಸಲಾಗಿದ್ದು, ಜನರು ಮನೆಯಿಂದ ಹೊರಬರಲಾರದೆ ಪರಿತಪಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಸಬರ್ಬನ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಅನ್ಯ ಮಾರ್ಗಗಳಲ್ಲಿ ನಿಯಮಿತ ವೇಗದಲ್ಲಿ ರೈಲು ಸಂಚಾರ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬಿಟ್ಟೂ ಬಿಡದೆ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಥಾಣೆ ಜಿಲ್ಲೆಯ ನೀರಾ ರಸ್ತೆ, ನಲ್ಲಸೋಪಾರ ಮತ್ತು ವಾಸೈ ಪ್ರದೇಶಗಳಲ್ಲಿ ಅನಾಹುತ ಸಂಭವಿಸಿದೆ.

loading...