ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿದ ಉಗ್ರರು

0
9
loading...

ಶ್ರೀನಗರ: ಮನೆಯೊಂದಕ್ಕೆ ನುಗ್ಗಿದ ಉಗ್ರಗಾಮಿಗಳು ಮಹಿಳೆಯಲ್ಲಿ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಂಡೀಪುರ್ ಜಿಲ್ಲೆಯ ಹಜನ್ ಶಹಗುಂಡ್ ಗ್ರಾಮದಲ್ಲಿ ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ. ಗ್ರಾಮಕ್ಕೆ ನುಗ್ಗಿದ ಇಬ್ಬರು ಭಯೋತ್ಪಾದಕರು ಅಬ್ದುಲ್ ಮಜೀಬ್ದಾರ್ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ನಂತರ ಅವರ ಪತ್ನಿಯ ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್‍ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದು ಬಂದಿದೆ.
ಕುಪ್ವಾರ ಜಿಲ್ಲೆಯ ಹಂದ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ಲಭ್ಯವಾಗುತ್ತಿದ್ದಂತೆಯೇ ಸೇನಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.  ಸೋಮವಾರ ಬೆಳಗ್ಗೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

loading...