ಮಾಧ್ಯಮಗಳ ಮೇಲೆ ಹರಿಹಾಯುವುದು ಶೋಭೆ ತರುವದಿಲ್ಲ: ಹೆಗಡೆ ಖಂಡನೆ

0
9
loading...

ಕನ್ನಡಮ್ಮ ಸುದ್ದಿ-ಶಿರಸಿ: ಸಮ್ಮಿಶ್ರ ಸರ್ಕಾರದ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಮಿ ಮಾಧ್ಯಮಗಳ ಮೇಲೆ ಹರಿಹಾಯುವುದು ಶೋಭೆ ತರುವದಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ತನ್ನ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮದ ಬಗ್ಗೆ ಹಗುರಾಗಿ ಮಾತನಾಡುವುದು ಸರಿಯಲ್ಲ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಖಂಡಿಸಿದರು.
ಪ್ರತ್ಯೇಕ ಕರ್ನಾಟಕ ವಿಚಾರಕ್ಕೆ ಮಾಧ್ಯಮಗಳನ್ನು ದೂರಿದ ಕುಮಾರಸ್ವಾಮಿ ಹೇಳಿಕೆಗೆ ಶಿರಸಿಯಲ್ಲಿ ಕಾಗೇರಿ ವಿರೋಧ ವ್ಯಕ್ತಪಡಿಸಿ, ಪ್ರಜಾಪ್ರಭುತ್ವದ ನಾಲ್ಕನೇ ಸ್ಥಂಭದ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿ ಕುಳಿತವರು ಈ ರೀತಿ ಮಾತನಾಡುವುದು ಸರಿಯಲ್ಲ. ಶಾಸಕಾಂಗ, ನ್ಯಾಯಾಂಗಕ್ಕೆ ಇರುವಂತೆ ಪತ್ರಿಕಾ ರಂಗಕ್ಕೂ ಅದರದೇ ಆದ ಸ್ಥಾನಮಾನ ಇದೆ. ಪತ್ರಿಕಾ ರಂಗ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಮಾಧ್ಯಮಗಳ ಕುರಿತು ಕೀಳಾಗಿ ಮಾತನಾಡುವುದನ್ನು ಮುಖ್ಯಮಂತ್ರಿಗಳು ಬಿಡಬೇಕು ಎಂದು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರು ಅವರೇ ಹೇಳಿಕೊಂಡಂತೆ ಸಾಂದರ್ಭಿಕ ಶಿಶುವಾಗಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಮ್ಮ ತಪ್ಪು ಮುಚ್ಚಿಕೊಳ್ಳಲು ಹಾಗೂ ಜನರ ಗಮನ ಬೇರೆಡೆ ಸೆಳೆಯಲು ವಿವಾದ ಸೃಷ್ಟಿಸುತ್ತಿವೆ ಎಂದು ಟೀಕಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಚಾರ ಹೈಕೋರ್ಟ್‌ನಲ್ಲಿದ್ದು, ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಮುಂದಾಗಬೇಕು. ವಾರ್ಡ್‌ ವಿಂಗಡಣೆ ಹಾಗೂ ಮೀಸಲಾತಿ ಕುರಿತು ಉತ್ತರ ಕನ್ನಡದಲ್ಲಿ ಜಿಲ್ಲಾಧಿಕಾರಿಗೆ ಈಗಾಗಲೇ ತಕರಾರು ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಯಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

loading...